ಡಾ.ಎಲ್.ಹನುಮಂತಯ್ಯ, ಉಮಾಶ್ರೀ, ಕೋರೆ ವಿಧಾನ ಪರಿಷತ್ತಿಗೆ
ಬೆಂಗಳೂರು : ವಿಧಾನ ಪರಿಷತ್ತಿನ 5 ಸ್ಥಾನಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿದ ಗಣ್ಯರನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪ್ರಕಟಿಸಿದ್ದಾರೆ. ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ ಕೋರೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎ. ಹಸನಬ್ಬ, ನಟಿ ಉಮಾಶ್ರೀ, ಮಂಡ್ಯ ಜಿಲ್ಲಾ ಮಾಜಿ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ. ರಮೇಶ್ರಾಜ್ ಹಾಗೂ ಕವಿ ಡಾ.ಎಲ್.ಹನುಮಂತಯ್ಯ ಅವರು ವಿಧಾನಸಭೆಗೆ ಆಯ್ಕೆಯಾದ ಸದಸ್ಯರು.
ಮಂಗಳವಾರ ಸಂಜೆ ದೆಹಲಿಯಿಂದ ಹಿಂತಿರುಗಿದ ಮುಖ್ಯಮಂತ್ರಿಗಳು ತಕ್ಷಣವೇ ವಿಧಾನಪರಿಷತ್ತಿಗೆ ಶಿಫಾರಸ್ಸು ಮಾಡಿರುವ ಸದಸ್ಯರ ಪಟ್ಟಿಯನ್ನು ರಾಜ್ಯಪಾಲರಿಗೆ ಕಳಿಸಿದರು. ಹೈದರಾಬಾದಿನಲ್ಲಿರುವ ರಾಜ್ಯಪಾಲರಾದ ರಮಾದೇವಿ, ಅಲ್ಲಿಂದಲೇ ಪಟ್ಟಿಗೆ ಹಸಿರು ನಿಶಾನೆ ತೋರಿದರು. ರಾಜಕೀಯ ಒತ್ತಡದಿಂದ ತಪ್ಪಿಸಿಕೊಳ್ಳುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ದಲಿತ ಕವಿ ಸಿದ್ಧಲಿಂಗಯ್ಯ ಅವರಿಂದ ತೆರವಾದ ಸ್ಥಾನಕ್ಕೆ ಮತ್ತೊಬ್ಬ ದಲಿತ ಕವಿ ಹನುಮಂತಯ್ಯ ಅವರನ್ನು ಮುಖ್ಯಮಂತ್ರಿ ಆರಿಸಿದ್ದರೆ, ಸಿನಿಮಾ ಮಂದಿಗೆ ಪ್ರಾತಿನಿಧ್ಯ ನೀಡುವ ಉದ್ದೇಶ ಉಮಾಶ್ರೀ ಅವರಿಗೆ ಅವಕಾಶ ಕಲ್ಪಿಸಿದೆ. ಉಳಿದ ಮೂವರೂ ಕಾಂಗ್ರೆಸ್ಸಿಗರು.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications