ಜೂ.21ರಿಂದ ವಾಲ್ಟರ್ ಥೇವಾರಂ ನೇತೃತ್ವದಲ್ಲಿವೀರಪ್ಪನ್ ಶಿಕಾರಿ
ಬೆಂಗಳೂರು : ಕಾಡುಗಳ್ಳ ವೀರಪ್ಪನ್ ಶಿಕಾರಿ ಗುರುವಾರದಿಂದ ಸಮರೋಪಾದಿಯಲ್ಲಿ ನಡೆಯಲಿದೆ. ಕರ್ನಾಟಕ ಹಾಗೂ ತಮಿಳುನಾಡು ಸರಕಾರಗಳು ವೀರಪ್ಪನ್ ವಿರುದ್ಧದ ಕಾರ್ಯಾಚರಣೆಗೆ ಹೊಸ ಕಾರ್ಯಪಡೆ ಹಾಗೂ ಕಾರ್ಯತಂತ್ರ ರೂಪಿಸಿದ್ದು, ತಮಿಳುನಾಡಿನ ವಾಲ್ಟರ್ ಥೇವಾರಂ ನೇತೃತ್ವದಲ್ಲಿ ಗುರುವಾರ ಕಾರ್ಯಾಚರಣೆ ತೀವ್ರಗೊಳ್ಳಲಿದೆ.
ಕಾಡುಗಳ್ಳನನ್ನು ಬಂಧಿಸಲು ಜಂಟಿ ಕಾರ್ಯಪಡೆಯ ಯೋಧರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ನೀಡಲಾಗಿದೆ ಎಂದು ಕರ್ನಾಟಕದ ಪೊಲೀಸ್ ಮಹಾ ನಿರ್ದೇಶಕ ಡಾ. ಕೆ. ಶ್ರೀನಿವಾಸನ್ ತಿಳಿಸಿದ್ದಾರೆ.
ಚೆನ್ನೈವರದಿ: ಈ ಮಧ್ಯೆ ಜಂಟಿ ಕಾರ್ಯಪಡೆಯ ಮುಖ್ಯಸ್ಥರಾಗಿರುವ ವಾಲ್ಟರ್ ಥೇವಾರಂ ಬುಧವಾರ ಬೆಳಗ್ಗೆ ಚೆನ್ನೈನಿಂದ ಕೊಯಮತ್ತೂರಿಗೆ ತೆರಳಿದ್ದು, ತಮಿಳುನಾಡು ಎಸ್.ಟಿ.ಎಫ್. ಮುಖ್ಯಸ್ಥ ವಿಜಯಕುಮಾರ್ ಹಾಗೂ ಇನ್ನಿತರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.
ಉನ್ನತ ಪೊಲೀಸ್ ಅಧಿಕಾರಿಗಳ ಮಟ್ಟದ ಚರ್ಚೆಯಲ್ಲಿ ಕೊಯಮತ್ತೂರು ಜಿಲ್ಲಾ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಸಹ ಪಾಲ್ಗೊಂಡಿದ್ದರು. ಕಾಡುಗಳ್ಳನ ವಿರುದ್ಧದ ಈ ಬಾರಿಯ ಕಾರ್ಯಾಚರಣೆ ಹೇಗಿರಬೇಕು ಎಂಬ ಬಗ್ಗೆ ಅವರು ಮಾತುಕತೆ ನಡೆಸಿದರು. ತಮ್ಮ ಕಾರ್ಯತಂತ್ರವನ್ನು ಜಗಜ್ಜಾಹೀರು ಪಡಿಸದೆ ವೀರಪ್ಪನ್ ವಿರುದ್ಧ ಕಾರ್ಯಾಚರಣೆ ನಡೆಸುವುದು ಥೇವಾರಂ ತಂತ್ರವಾಗಿದೆ.
ಮಿಗಿಲಾಗಿ ಥೇವಾರಂ ಅವರು, ಈ ಬಾರಿ ಪೊಲೀಸ್ ಇಂಟಲಿಜೆನ್ಸ್ ಪಡೆಯ ಮಾಹಿತಿಗಳಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಈರೋಡ್ ಅಥವಾ ಕೊಯಮತ್ತೂರಿನಿಂದ ಗುರುವಾರ ಬೆಳಗ್ಗೆ ಕಾರ್ಯಾಚರಣೆ ಆರಂಭಗೊಳ್ಳಲಿದೆ. ಹಾಸನೂರು ಇಲ್ಲ ಸತ್ಯಮಂಗಲ ಕಾಡಿನಿಂದ ಕಾರ್ಯಾಚರಣೆ ನಡೆಸುವ ಸಾಧ್ಯತೆಯೂ ಇದೆ.
ಮೈಸೂರು ವರದಿ : ಎರಡು ಮೂರು ದಿನಗಳ ಹಿಂದೆ ಕರ್ನಾಟಕ ಕಾರ್ಯಪಡೆಯ ಮುಖ್ಯಸ್ಥ ಕೆಂಪಯ್ಯ ಅವರು, ಚಾಮರಾಜನಗರಕ್ಕೆ ಭೇಟಿ ನೀಡಿದ್ದು, ಅಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಆದರೆ, ಕಾರ್ಯಾಚರಣೆ ಬಗ್ಗೆ ಅವರು ಯಾವುದೇ ವಿವರ ನೀಡಿಲ್ಲ.
ಮೂಲಗಳ ಪ್ರಕಾರ ಯಾವುದೇ ಕ್ಷಣದಲ್ಲಿ ಮಲೆಮಹದೇಶ್ವರ ಬೆಟ್ಟ ಪ್ರದೇಶದಿಂದ ಕರ್ನಾಟಕ ಪೊಲೀಸರು ಕಾರ್ಯಾಚರಣೆ ಆರಂಭಿಸುವ ಲಕ್ಷಣಗಳು ಕಂಡುಬಂದಿವೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications