ಕುದುರೆಮುಖ ಗಣಿಗಾರಿಕೆ : ಕೋರ್ಟ್ ಆದೇಶ ಉಲ್ಲಂಘಿಸಿದ ಸರ್ಕಾರ
ಬೆಂಗಳೂರು : ಕುದುರೆಮುಖರಾಷ್ಟ್ರೀಯ ಉದ್ಯಾನವನವನ್ನು ರಕ್ಷಿಸಿ ಎಂದು ಪರಿಸರವಾದಿಗಳು ಬೊಬ್ಬಿರಿಯುತ್ತಿದ್ದಂತೆಯೇ, ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ 3703.55 ಹೆಕ್ಟೇರ್ ಅರಣ್ಯ ಭೂಮಿಯನ್ನು ಸರಕಾರ ಡಿನೋಟಿಫೈ ಮಾಡಿ ಗಣಿಗಾರಿಕೆಗೆ ಅನುವು ಮಾಡಿಕೊಟ್ಟಿದೆ.
ಕಳೆದ ಎರಡು ವರ್ಷಗಳ ಹಿಂದೆ ಗುತ್ತಿಗೆ ಅವಧಿ ಮುಗಿದು ಹೋಗಿದ್ದರೂ ಮತ್ತೆ ಕೆಐಓಸಿಎಲ್ಗೆ ಗಣಿಗಾರಿಕೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರಕಾರ ಈ ಕ್ರಮ ಕೈಗೊಂಡಿದೆ. ಯಥಾವತ್ತಾಗಿ ಕುದುರೆಮುಖ ವೈಲ್ಡ್ ಲೈಫ್ ಫೌಂಡೇಷನ್ ಸರಕಾರದ ಈ ಕ್ರಮವನ್ನು ನ್ಯಾಯಾಂಗ ನಿಂದನೆಯ ಕ್ರಮವಾಗಿದೆ ಎಂದು ಆರೋಪಿಸಿದೆ.
ಕಳೆದ ನವೆಂಬರ್ 11ರಂದು ರಾಜ್ಯ ಸರಕಾರಕ್ಕೆ ಆದೇಶ ನೀಡಿ ಯಾವುದೇ ಕಾರಣಕ್ಕೂ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಗೆ ಬರುವ ಭೂಮಿಯನ್ನು ಡಿನೋಟಿಫೈ ಮಾಡಬಾರದು ಎಂದು ನ್ಯಾಯಾಲಯ ಆದೇಶಿಸಿತ್ತು.
ಒಂದುವೇಳೆ ಭೂಮಿಯನ್ನು ಡಿನೋಟಿಫೈ ಮಾಡುವ ಪ್ರಸಂಗ ಎದುರಾದಲ್ಲಿ ಪ್ರಸ್ತಾಪವನ್ನು ವಿಧಾನಸಭೆ ಮುಂದಿಡಬೇಕು ಮತ್ತು ಅರಣ್ಯಜೀವಿ ಮಂಡಳಿಯ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದೂ ನ್ಯಾಯಾಲಯ ಹೇಳಿತ್ತು. ಆದರೆ ರಾಜ್ಯ ಸರಕಾರ ಕೋರ್ಟಿನ ಈ ಯಾವುದೇ ಆದೇಶಗಳಿಗೆ ಕಿವಿಗೊಡದೇ ರಾಷ್ಟ್ರೀಯ ಉದ್ಯಾನವನದ ಭೂಮಿಯನ್ನು ಡಿನೋಟಿಫೈ ಮಾಡಿದೆ ಎಂದು ಕುದುರೆಮುಖ ವೈಲ್ಡ್ ಲೈಫ್ ಫೌಂಡೇಷನ್ ಸರಕಾರದ ಕ್ರಮವನ್ನು ಖಂಡಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications