ಬಿಜಾಪುರದ ಮಹಾಲಿಂಗಪುರ ಅಭಿವೃದ್ಧಿಗೆ ಕೇಂದ್ರದಿಂದ 2 ಕೋಟಿ
ಮಹಾಲಿಂಗಪುರ: ಬಿಜಾಪುರ ಜಿಲ್ಲೆಯ ಮಹಾಲಿಂಗಪುರ ತಾಲೂಕು ಕೊನೆಗೂ ಕೇಂದ್ರ ಸರಕಾರದ ಕಣ್ಣಿಗೆ ಬಿದ್ದಿದೆ. ಪಟ್ಟಣದ ಅಭಿವೃದ್ಧಿಗೆಂದು 2 ಕೋಟಿ ರೂಪಾಯಿ ಕೇಂದ್ರದ ನೆರವು ಬಂದಿರುವುದಾಗಿ ಜಮಖಂಡಿ ನಗರ ಸಭೆಯ ಅಧ್ಯಕ್ಷ ಸೈಯ್ಯದ್ ಮಸ್ತಾನ್ ಹೇಳಿದ್ದಾರೆ.
ಸಣ್ಣ ಹಾಗೂ ಮಧ್ಯಮ ನಗರ ಮತ್ತು ಪಟ್ಟಣಗಳ ಅಭಿವೃದ್ಧಿ ಯೋಜನೆಯಡಿಯಲ್ಲಿ ಮಹಾಲಿಂಗಪುರಕ್ಕೆ ಈ ಹಣ ದೊರೆತಿದ್ದು, 80 ಲಕ್ಷ ರೂಪಾಯಿ ವೆಚ್ಚದಲ್ಲಿ ವಾಣಿಜ್ಯ ಸಂಕೀರ್ಣ ಮತ್ತು 60 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಮತ್ತು ಒಳಚರಂಡಿಗಳನ್ನು ಅಭಿವೃದ್ಧಿಗೊಳಿಸಲಾಗುವುದು. ಉಳಿದ ಹಣದಲ್ಲಿ ನಗರ ಸಭೆ ಕಟ್ಟಡ ಮತ್ತು ಸಮುದಾಯ ಭವನವೊಂದನ್ನು ನಿರ್ಮಿಸಲಾಗುವುದು ಎಂದು ಸೈಯ್ಯದ್ ಮಸ್ತಾನ್ ಹೇಳಿದ್ದಾರೆ.
ಇದರ ಜೊತೆಗೆ ಶಾಶ್ವತ ಕುಡಿಯುವ ನೀರು ಒದಗಿಸಲು ಕೇಂದ್ರವು 8 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಿದೆ ಎಂದು ಸೈಯ್ಯದ್ ಹೇಳಿದ್ದಾರೆ. ಮಳೆಗಾಲದಲ್ಲಿ ಆರಂಭವಾಗುವ ಕುಡಿಯುವ ನೀರಿನ ಮತ್ತು ಒಳಚರಂಡಿ ಕಾಮಗಾರಿ ಮುಂದಿನ ಮಳೆಗಾಲಕ್ಕಾದರೂ ಜನರ ಉಪಯೋಗಕ್ಕೆ ಬಂದೀತೇ ?
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications