‘ಶಂಕರಾಭರಣಂ’ ನಾದಾಮೃತಧಾರೆಯ ಮಹಾದೇವನ್ ನಿಧನ
ಚೆನ್ನೆ: ದಕ್ಷಿಣ ಭಾರತ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ಕೆ.ವಿ. ಮಹಾದೇವನ್ ಗುರುವಾರ ಚೆನ್ನೈನ ಖಾಸಗಿ ಆಸ್ಪತ್ರೆಯಾಂದರಲ್ಲಿ ನಿಧನರಾದರು. 83 ವರ್ಷದ ಮೃತರು ಪತ್ನಿ , ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಅಭಿಮಾನಿ ವರ್ಗವನ್ನು ಅಗಲಿದ್ದಾರೆ.
ಕೃಷ್ಣರುಕ್ಮಿಣಿ, ಗುರು ಶಿಷ್ಯರು ಹಾಗೂ ಪ್ರಚಂಡ ಕುಳ್ಳ ಸಿನಿಮಾಗಳಿಗೆ ಸಂಗೀತ ನೀಡುವ ಮೂಲಕ ಕನ್ನಡ ಚಿತ್ರರಂಗದಲ್ಲೂ ಪರಿಚಿತರಾಗಿದ್ದ ಮಹಾದೇವನ್ ಕರ್ಣಾನಂದಕರ ಸಂಗೀತಕ್ಕೆ ಮತ್ತೊಂದು ಹೆಸರು. ಪ್ರಸಿದ್ಧ ನಿರ್ದೇಶಕ ಕೆ. ವಿಶ್ವನಾಥ್ ಹಾಗೂ ಮಹಾದೇವನ್ ಅವರ ಜೋಡಿ ಹೆಸರು ಪಡೆದಿದ್ದು , ಇದೇ ಜೋಡಿಯ ಶಂಕರಾಭರಣಂ ತೆಲುಗು ಸಿನಿಮಾದ ಸಂಗೀತಕ್ಕಾಗಿ ಮಹಾದೇವನ್ ರಾಷ್ಟ್ರೀಯ ಪುರಸ್ಕಾರ ಪಡೆದಿದ್ದರು.
ತಮಿಳು, ತೆಲುಗು, ಕನ್ನಡ, ಮಲಯಾಳಂ ಸೇರಿದಂತೆ 1500 ಕ್ಕೂ ಹೆಚ್ಚು ಚಿತ್ರಗಳಿಗೆ ಅವರು ಸಂಗೀತ ನೀಡಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ಮಹಾದೇವನ್ ಚಿತ್ರೋದ್ಯಮ ಪ್ರವೇಶಿಸಿದ್ದು ನಿರ್ಮಾಪಕರಾಗಿ. ‘ಅಲ್ಲಿ ಪೆಟ್ರ ಪಿಳ್ಳೈ’ ತಮಿಳು ಸಿನಿಮಾ ನಿರ್ಮಿಸುವ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು ಅಗ್ನಿಪ್ರಾಣ ಮಹಿಮೈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾದರು. ನಂತರದ್ದು ಯಶಸ್ಸಿನ ಕಥೆ.
ಮಹಾದೇವನ್ ಅವರ ನಿಧನಕ್ಕೆ ಅತೀವ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ವಾಜಪೇಯಿ, ಸಂಗೀತ ನಿರ್ದೇಶಕರಾಗಿ ಅವರು ಹರಿಸಿರುವ ನಾದಸುಧೆ ಭಾರತೀಯ ಚಿತ್ರರಂಗದಲ್ಲಿ ಬಹುಕಾಲ ಉಳಿಯುತ್ತದೆ ಎಂದು ಬಣ್ಣಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications