ನದಿಗೆ ಬಿದ್ದ ಮಂಗಳೂರು - ಚೆನ್ನೈ ಮೇಲ್ ಭಾರಿ ಸಾವಿನ ಶಂಕೆ
ಕೋಳಿಕ್ಕೋಡ್ : ಕೇರಳದ ಮಲ್ಲಪುರಂ ಜಿಲ್ಲೆಯ ಕೋಳಿಕ್ಕೋಡ್ ಬಳಿ ಶುಕ್ರವಾರ ಸಂಜೆ 5 ಗಂಟೆಯ ಸಮಯದಲ್ಲಿ ಮಂಗಳೂರು - ಚೆನ್ನೈ ಮೇಲ್ ಹಳಿತಪ್ಪಿದ ಪರಿಣಾಮವಾಗಿ ಮೂರು ಬೋಗಿಗಳು ಕಡಲುಂಡಿ ನದಿಗೆ ಉರುಳಿದ್ದು 16 ಮಂದಿ ಸತ್ತು ನೂರಾರು ಜನರು ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಅಪಘಾತ ನಡೆದ ಸ್ಥಳದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಪರಿಹಾರ ಕಾಮಗಾರಿಗೆ ಅಡ್ಡಿಯಾಗಿದೆ. ಈ ಪ್ರದೇಶದಲ್ಲಿ ಕಳೆದ ಒಂದು ವಾರದಿಂದಲೂ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ಕಡಲುಂಡಿ ನದಿ ಉಕ್ಕಿಹರಿಯುತ್ತಿದೆ. ಕೋಳಿಕ್ಕೋಡ್‌ಗೆ 20 ಕಿ.ಮೀಟರ್ ದೂರದ ಈ ಸೇತುವೆಯಿಂದ ಮಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರೈಲಿನ 3 ಬೋಗಿಗಳು ನದಿಗೆ ಉರುಳಿದ್ದು, ಇನ್ನೂ ಮೂರು ಬೋಗಿಗಳು ಹಳಿತಪ್ಪಿವೆ.
ಆದರೂ, ಮಳೆಯನ್ನು ಲೆಕ್ಕಿಸದೆ ನೌಕಪಡೆ, ಸ್ವಯಂಸೇವಕರು, ಅರೆ ಸೇನಾಪಡೆಯ ಸಿಬ್ಬಂದಿ ನೀರಿನಲ್ಲಿ ಮುಳುಗಿರುವ ಬೋಗಿಗಳಿಂದ ಜನರನ್ನು ರಕ್ಷಿಸಲು ಹೋರಾಟ ನಡೆಸಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಧಾವಿಸಿರುವ ಕೇರಳದ ಮುಖ್ಯಮಂತ್ರಿ ಎ.ಕೆ. ಆಂಟನಿ ಅವರು ಕೋಳಿಕ್ಕೋಡ್ ತಲುಪಿದ್ದಾರೆ. ಈ ಮಧ್ಯೆ ಅಪಘಾತದ ಬಗ್ಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿರುವ ಕೇಂದ್ರ ರೈಲ್ವೆ ಸಚಿವ ನಿತೀಶ್ ಕುಮಾರ್ ತ್ವರಿತ ಕಾಮಗಾರಿಗೆ ಆದೇಶ ನೀಡಿದ್ದಾರೆ. ಅವರೂ ಅಪಘಾತ ನಡೆದ ಸ್ಥಳಕ್ಕೆ ಧಾವಿಸಿದ್ದಾರೆ.
ಈವರೆಗೆ 100ಕ್ಕೂ ಹೆಚ್ಚು ಗಾಯಾಳುಗಳನ್ನು ಕೋಳಿಕ್ಕೋಡ್‌ನ ವೈದ್ಯಕೀಯ ಕಾಲೇಜು ಅಸ್ಪತ್ರೆಗೆ ಸೇರಿಸಲಾಗಿದೆ. ನೀರಿನಿಂದ 10 ಶವಗಳನ್ನು ಹೊರತೆಗೆಯಲಾಗಿದೆ. ಇನ್ನೂ ನೂರಾರು ಜನ ಬೋಗಿಯಲ್ಲಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ಬಗ್ಗೆ ಮಾಹಿತಿ ನೀಡಲು ನಿರ್ವಹಣೆ ಕೇಂದ್ರವನ್ನು ತೆರೆಯಲಾಗಿದೆ. ಪ್ರಯಾಣಿಕರ ಬಂಧು - ಮಿತ್ರರಿಗೆ ಮಾಹಿತಿ ಒದಗಿಸಲಾಗುತ್ತಿದೆ.
ನಿರ್ವಹಣೆ ಕೇಂದ್ರದ ದೂರವಾಣಿ ಸಂಖ್ಯೆ - 0471 - 333147, 0495 - 701499, 0471 - 333196, 0471 - 327375.ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications