ಕೊಡವ ಮತ್ತು ಉರ್ದು ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ನೇಮಕ
ಬೆಂಗಳೂರು : ಕರ್ನಾಟಕ ಉರ್ದು ಸಾಹಿತ್ಯ ಅಕಾಡೆಮಿಗೆ ಪ್ರೊ. ಅಬ್ದುಲ್ ವಹಾಬ್ ಅಂದಲೀಪ ಮತ್ತು ಕೊಡವ ಸಾಹಿತ್ಯ ಅಕಾಡೆಮಿಗೆ ಬಾಚರಣೆಯಂಡ ಅಪ್ಪಣ್ಣ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ರಾಣಿ ಸತೀಶ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವೆ ಮೂರು ವರ್ಷಗಳ ಅವಧಿಗೆ ಸದಸ್ಯರನ್ನೂ ನೇಮಕ ಮಾಡಲಾಗಿದೆ ಎಂದರು. ಕೊಡವ ಅಕಾಡೆಮಿ ಅಧ್ಯಕ್ಷರಾಗಿರುವ ಬಾಚರಣೆಯಂಡ ಅಪ್ಪಣ್ಣ ಅವರು ಕೊಡಗು ವಿಮೋಚನಾ ಚಳುವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿರುವುದರಿಂದ ರಾಜ್ಯದ ಸಮಗ್ರತೆಗೆ ಧಕ್ಕೆಯಾಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಸಿದ ಸಚಿವೆ ಅಪ್ಪಣ್ಣ ಅವರು ಈಗ ತಮ್ಮ ನಿಲುವು ಬದಲಾಯಿಸಿಕೊಂಡಿದ್ದಾರೆ ಎಂದು ಸಮರ್ಥಿಸಿಕೊಂಡರು.
ಉರ್ದು ಅಕಾಡೆಮಿ ಅಧ್ಯಕ್ಷರಾಗಿರುವ ಅಬ್ದುಲ್ ವಹಾಬ್ ಮೂಲತಃ ಗುಲ್ಬರ್ಗದವರು. ತಮ್ಮ ಅವಧಿಯಲ್ಲಿ ಉರ್ದು ಮತ್ತು ಕನ್ನಡ ಭಾಷೆಯಲ್ಲಿನ ಅತ್ಯುತ್ತಮ ಸಾಹಿತ್ಯ ಕೃತಿಗಳ ಪರಸ್ಪರ ಅನುವಾದ ಕಾರ್ಯದತ್ತ ಹೆಚ್ಚಿನ ಗಮನ ಕೊಡುವುದಾಗಿ ಹೇಳಿದರು. ಅಲ್ಲದೆ ಉರ್ದು ಮಾದ್ಯಮ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಹೆಚ್ಚಿಸಬೇಕು ಮತ್ತು 3 ನೇ ತರಗತಿಯಿಂದಲೇ ಕನ್ನಡ ಕಲಿಕೆ ಕಡ್ಡಾಯ ಮಾಡಬೇಕು. ಇದರಿಂದ ಕನ್ನಡ ಮತ್ತು ಉರ್ದು ಭಾಷಾ ಬಾಂಧವ್ಯ ಬಿಗಿಯಾಗುತ್ತದೆ ಎಂದು ವಹಾಬ್ ಅಭಿಪ್ರಾಯಪಟ್ಟರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications