‘ಚಂಪಾ ಸಂಘಟಕರಾ? ಅವರು ಸಾಹಿತ್ಯಸಮ್ಮೇಳನ ನಡೆಸಿದ್ದಾರಾ?’
ಮಂಗಳೂರು : ರಾಜ್ಯದ ಜನತೆಯ ಸ್ವಾಭಿಮಾನದ ಸಂಕೇತವಾದ ಕನ್ನಡ ಸಾಹಿತ್ಯ ಪರಿಷತ್ತು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ವ್ಯವಸ್ಥಿತ ರೀತಿಯಲ್ಲಿ ಸಂಪನ್ಮೂಲ ಕ್ರೋಢೀಕರಿಸಿ ಅದನ್ನು ಸದೃಢಗೊಳಿಸುವುದಾಗಿ ರಾಜ್ಯ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹರಿಕೃಷ್ಣ ಪುನರೂರು ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ 900 ಮತಗಳಿಂದ ಸೋತಿದ್ದೆ . ಈ ಸಾರಿ ಗೆಲುವಿಗಾಗಿ ರಾಜ್ಯಾದ್ಯಂತ ವ್ಯಾಪಕ ಪ್ರಚಾರ ಕೈಗೊಂಡಿರುವುದಾಗಿ ತಿಳಿಸಿದರು. ದ.ಕ. ಜಿಲ್ಲಾ ಕಸಾಪ ಅಧ್ಯಕ್ಷರಾಗಿ 12 ವರ್ಷಗಳ ಅನುಭವದ ಬೆಳಕಿನಲ್ಲಿ ರಾಜ್ಯದಲ್ಲಿ ಸಾಹಿತ್ಯದ ಹೊಸ ತಂಗಾಳಿ ಬೀಸುವಂತೆ ಮಾಡುವ ತಮ್ಮ ಕನಸು ಕೈಗೂಡಲು ಸಹಕರಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.
ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರೆ, ಪ್ರತಿ ಜಿಲ್ಲಾ ಕೇಂದ್ರದಲ್ಲಿ ಕನ್ನಡ ಪುಸ್ತಕ ಮಾರಾಟ ಮಳಿಗೆ ಸ್ಥಾಪನೆ ಹಾಗೂ ಪ್ರತಿ ತಾಲ್ಲೂಕು ಕೇಂದ್ರದಲ್ಲಿ ಸಾಹಿತ್ಯ ಭವನ ಸ್ಥಾಪನೆಗೆ ನಿವೇಶನ ದೊರಕಿಸಿಕೊಡಲು ಶ್ರಮಿಸುವುದಾಗಿ ಹೇಳಿದರು. ನಾನು ಸಾಹಿತಿಯಾಗದೆ ಇರುವುದರಿಂದ ಎಲ್ಲರ ಸಾಹಿತ್ಯವನ್ನು ಗೌರವಿಸುತ್ತೇನೆ ಎಂದು ಚಂಪಾ ಅವರನ್ನು ಪರೋಕ್ಷವಾಗಿ ಟೀಕಿಸಿದ ಪುನರೂರು, ಚಂಪಾ ಸಂಘಟಕರಾ? ಅವರು ಸಾಹಿತ್ಯ ಸಮ್ಮೇಳನ ನಡೆಸಿದ್ದಾರಾ? ಎಂದು ಕಟಕಿಯಾಡಿದರು.
ಪುನರೂರು ಸಾಹಿತಿಯೂ ಅಲ್ಲ , ಸಂಘಟಕರೂ ಅಲ್ಲ ಎಂದು ಕಸಾಪ ಅಧ್ಯಕ್ಷತೆಗೆ ಪ್ರಬಲ ಸ್ಪರ್ಧೆ ಒಡ್ಡಿರುವ ಚಂದ್ರಶೇಖರ ಪಾಟೀಲರ ಟೀಕೆಗೆ ಪುನರೂರು ಪ್ರತಿಕ್ರಿಯಿಸುತ್ತಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications