Get Updates
Get notified of breaking news, exclusive insights, and must-see stories!

ವೀರಪ್ಪನ್‌ ಶಿಕಾರಿಗೆ ತಂತ್ರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಸಭೆ

ಬೆಂಗಳೂರು : ಕಾಡುಗಳ್ಳ, ನರಹಂತಕ ವೀರಪ್ಪನ್‌ನನ್ನು ಹಿಡಿಯಲು ಸ್ವತಂತ್ರ ಕಾರ್ಯತಂತ್ರಗಳನ್ನು ರೂಪಿಸಲು ತಮಿಳುನಾಡು ವಿಶೇಷ ಕಾರ್ಯಪಡೆಯ ಮುಖ್ಯಸ್ಥ ವಾಲ್ಟರ್‌ ಥೇವಾರಂ, ಕರ್ನಾಟಕದ ಕಾರ್ಯಪಡೆ ಮುಖ್ಯಸ್ಥ ಕೆಂಪಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ಸೋಮವಾರ ಆರಂಭವಾಗಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಈ ಹೊತ್ತು ಉನ್ನತಾಧಿಕಾರಿಗಳ ಸಭೆ ನಡೆಯುತ್ತಿದ್ದು, ಕಾಡುಗಳ್ಳನ ಬಂಧಿಸಲು ಯಾವ ತಂತ್ರಗಳನ್ನು ಅನುಸರಿಸಬೇಕು ಎಂಬುದನ್ನು ಅವರೇ ನಿರ್ಧರಿಸುತ್ತಾರೆ ಎಂದು ರಾಜ್ಯದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ಹಾಗೂ ತಮಿಳುನಾಡಿನ ವಿಶೇಷ ಕಾರ್ಯಪಡೆಗಳು ಸಂಘಟಿತವಾಗಿ ನಡೆಸುವ ಈ ಜಂಟಿ ಕಾರ್ಯಾಚರಣೆಯ ತಂತ್ರವನ್ನು ಅವರೇ ಚರ್ಚಿಸಿ ರೂಪಿಸುತ್ತಾರೆ. ಅವರಿಗೆ ಸ್ವತಂತ್ರ ತೀರ್ಮಾನ ಕೈಗೊಳ್ಳಲು ಅವಕಾಶ ನೀಡಲಾಗಿದೆ. ಯಾವುದೇ ಅಡೆ ತಡೆ ಇಲ್ಲದೆ ಜಂಟಿ ಕಾರ್ಯಪಡೆ ಕಾರ್ಯಾಚರಣೆ ನಡೆಸುತ್ತದೆ ಎಂದು ಖರ್ಗೆ ಸೋಮವಾರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

(ಇನ್‌ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+