ಬೆಂಗಳೂರು ಏರ್ಪೋರ್ಟ್: ಸೀಮೆನ್ಸ್ ಪಾಲುದಾರಿಕೆ ನಿರೀಕ್ಷೆ
ಬೆಂಗಳೂರು : ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಯ ಕಾಮಗಾರಿ ಆರಂಭಿಸಲು ಸೀಮೆನ್ಸ್, ಝೂರಿಚ್ ಏರ್ಪೋರ್ಟ್ ಹಾಗೂ ಲಾರ್ಸನ್ ಮತ್ತು ಟೂಬ್ರೋ ಕಂಪೆನಿ ಸಮೂಹಗಳ ಪಾಲುದಾರಿಕೆಯನ್ನು ಸರಕಾರ ತಾತ್ಕಾಲಿಕವಾಗಿ ಒಪ್ಪಿಕೊಂಡಿದೆ.
ಈ ಕಂಪೆನಿ ಸಮೂಹಗಳ ಜೊತೆ ಕೊನೆಯ ಸುತ್ತಿನ ಮಾತುಕತೆ ಬಾಕಿ ಉಳಿದಿದ್ದು, ಸಚಿವ ಸಂಪುಟದಲ್ಲಿ ವಿವರವಾದ ಚರ್ಚೆ ನಡೆಸಿದ ತಕ್ಷಣ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಾರ್ತಾ ಸಚಿವ ಬಿ.ಕೆ. ಚಂದ್ರರಶೇಖರ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಾಮಗಾರಿ ಕೈಗೆತ್ತಿಕೊಳ್ಳಲು ಪೈಪೋಟಿ ನಡೆಸುತ್ತಿದ್ದ ಹಾಕ್ ಟೀಫ್ ಮತ್ತು ಡೆಸಲ್ಡಾಲ್ಫ್ ಕಂಪೆನಿ ಸಮೂಹಗಳ ಪೈಕಿ ಸೀಮೆನ್ಸ್ ಸಮೂಹವನ್ನೇ ಆರಿಸಿಕೊಳ್ಳಲಾಯಿತು. ಪ್ರಸ್ತುತ, ಸೀಮೆನ್ಸ್ ಕಂಪೆನಿ ಜೊತೆಗೆ ವಿಮಾನ ನಿಲ್ದಾಣ ಅಭಿವೃದ್ಧಿ, ರಾಜ್ಯ ಸರಕಾರದ ನೆರವು ಮತ್ತು ಶೇರುದಾರರ ಒಪ್ಪಂದಗಳ ಬಗೆಗೆ ತಜ್ಞರು ಮಾತುಕತೆ ನಡೆಸಲಿದ್ದಾರೆ.
ಮೊದಲ ಹಂತದಲ್ಲಿ ವರ್ಷಕ್ಕೆ 3.7 ದಶಲಕ್ಷ ಪ್ರಯಾಣಿಕರ ಸಂಚಾರ ಮತ್ತು 1.40 ಲಕ್ಷ ಟನ್ ಸರಕು ಸಾಗಾಣಿಕೆ ಸಾಮರ್ಥ್ಯದ ವಿಮಾನ ನಿಲ್ದಾಣವನ್ನು ನಿರ್ಮಿಸಲು 1.180 ಕೋಟಿ ರೂಪಾಯಿ ವೆಚ್ಚದ ಯೋಜನೆ ಸೀಮೆನ್ಸ್ ಕಂಪೆನಿ ಸರಕಾರದ ಮುಂದಿಟ್ಟಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications