ಸಿ.ಇ.ಟಿ : 100 ಅಂಗವಿಕಲರಿಗೆ ಎಂಜಿನಿಯರಿಂಗ್, ವೈದ್ಯ ಸೀಟು
ಬೆಂಗಳೂರು : ಪ್ರಸಕ್ತ ಸಾಲಿನ ವೃತ್ತಿಶಿಕ್ಷಣ ಕೋರ್ಸ್ಗಳ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಮಾಡುವ ಮೊದಲ ಸುತ್ತಿನ ಪ್ರಕ್ರಿಯೆ ಆರಂಭಗೊಂಡಿದ್ದು, ಇನ್ನು ಒಂದೆರಡು ದಿನದಲ್ಲಿಯೇ ಸೀಟು ಹಂಚಿಕೆ ಪಟ್ಟಿ ಪ್ರಕಟಗೊಳ್ಳಲಿದೆ.
ಜೂನ್ 21ರಂದು ಕರ್ನಾಟಕ ರಾಜ್ಯ ಕೋಟಾದಲ್ಲಿ ಸೀಟು ಕೋರಿ ಅರ್ಜಿ ಸಲ್ಲಿಸಿದ್ದ ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ಬರುತ್ತದೋ ಇಲ್ಲವೋ ಎಂಬ ಪರೀಕ್ಷೆಯನ್ನು ಸಾಮಾನ್ಯ ಪ್ರವೇಶ ಪರೀಕ್ಷೆ ಘಟಕದ ಸಿಬ್ಬಂದಿ ನಡೆಸಿದರು.
ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ವೃತ್ತ ಪತ್ರಿಕೆಗಳನ್ನು ನೀಡಿ, ಓದಿಸಿದ್ದಲ್ಲದೆ, ಸುಲಭವಾದ ಪದಗಳನ್ನು ಬರೆಸಿ ಅರ್ಹ ಅಭ್ಯರ್ಥಿಗಳನ್ನು ಪಟ್ಟಿಮಾಡಲಾಯಿತು. ಅಂಗವಿಕಲ ವಿದ್ಯಾರ್ಥಿಗಳಿಗೆ ಮೀಸಲಾಗಿರುವ ಸ್ಥಾನಗಳಿಗೆ ಜೂನ್ 25ರ ಸೋಮವಾರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.
ವೈದ್ಯಕೀಯ ತಪಾಸಣೆಗೆ ಹಾಜರಾಗಿದ್ದ 140 ಅಂಗವಿಕಲರ ಪೈಕಿ 100 ಅಂಗವಿಕಲ ವಿದ್ಯಾರ್ಥಿಗಳಿಗೆ ವೃತ್ತಿಶಿಕ್ಷಣ ಕೋರ್ಸ್ಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಯ್ಕೆಯಾಗಿರುವ 100 ಅಂಗವಿಕಲ ವಿದ್ಯಾರ್ಥಿಗಳ ಪೈಕಿ 12 ವಿದ್ಯಾರ್ಥಿಗಳಿಗೆ ವೈದ್ಯಕೀಯ, ಇಬ್ಬರಿಗೆ ದಂತವೈದ್ಯಕೀಯ ಹಾಗೂ 86 ವಿದ್ಯಾರ್ಥಿಗಳಿಗೆ ಎಂಜನಿಯರಿಂಗ್ ಸೀಟು ಹಂಚಲಾಗಿದೆ.
40 ವಿದ್ಯಾರ್ಥಿಗಳನ್ನು ಅಂಗವಿಕಲ ಮೀಸಲಾತಿಗೆ ಅನರ್ಹರೆಂದು ಪರಿಗಣಿಸಲಾಗಿದ್ದು, ಆ ವಿದ್ಯಾರ್ಥಿಗಳು ತಾವು ಪಡೆದಿರುವ ರ್ಯಾಂಕ್ ಆಧಾರದ ಮೇಲೆ ಸಾಮಾನ್ಯ ವರ್ಗದ ಕೋಟಾದಲ್ಲಿ ಸೀಟು ಪಡೆಯಬಹುದಾಗಿದೆ ಎಂದು ಅವರು ಹೇಳಿದ್ದಾರೆ. ಮಂಗಳವಾರ ಕ್ರೀಡಾ ಅಭ್ಯರ್ಥಿಗಳ ಕೋಟಾ ಹಾಗೂ ಬುಧವಾರ ಎನ್.ಸಿ.ಸಿ. ಕೋಟಾದ ಸೀಟು ಹಂಚಿಕೆ ಪ್ರಕ್ರಿಯೆ ನಡೆಯಲಿದೆ.
ಮುಖಪುಟ / ಇವತ್ತು... ಈ ಹೊತ್ತು...
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications