ದಿನಕರ್ ಪುಸ್ತಕ ನಿಷೇಧಿಸಿದರೆ ಪ್ರತಿಭಟನೆ- ಕಾನೂನು ಸಮರ
ಬೆಂಗಳೂರು : ರಾಜ್ ಅಪಹರಣ ಪ್ರಕರಣ ಕುರಿತಂತೆ ಪುಸ್ತಕ ಬರೆಯುತ್ತಿರುವ ರಾಜ್ಯದ ಮಾಜಿ ಪೊಲೀಸ್ ನಿರ್ದೇಶಕ ಸಿ.ದಿನಕರ್ ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್, ದಿನಕರ್ ಅವರ ಪುಸ್ತಕದ ವಿರುದ್ಧ ಕ್ರಮ ಕೈಗೊಂಡರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಿರಾತಂಕವಾಗಿ, ಯಾವುದೇ ರಾಜಿಗೆ- ಬೆದರಿಕೆಗೆ ಒಳಗಾಗದೆ ಪುಸ್ತಕ ರಚಿಸುವಂತೆ ದಿನಕರ್ ಅವರಲ್ಲಿ ಮನವಿ ಮಾಡಿಕೊಂಡ ವಾಟಾಳ್, ಪುಸ್ತಕದ ಕುರಿತು ಆಕ್ಷೇಪ ಎತ್ತಲು ಸರ್ಕಾರ ಯಾರು ಎಂದು ಪ್ರಶ್ನಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದ ಅವರು, ಜನತೆಗೆ ಸತ್ಯ ಸಂಗತಿಯನ್ನು ತಿಳಿಸಲಿಕ್ಕಾಗಿ ಪುಸ್ತಕ ಬರೆಯುತ್ತಿರುವ ದಿನಕರ್ ಅವರನ್ನು ಅಭಿನಂದಿಸಿದರು.
ಪುಸ್ತಕದ ಮೂಲ ಪ್ರತಿಯನ್ನು ಸರ್ಕಾರಕ್ಕೆ ಯಾಕೆ ನೀಡಬೇಕು. ಇದು ಪ್ರಜಾಪ್ರಭುತ್ವ ಕ್ರಮವಲ್ಲ . ಈ ಕುರಿತು ಸಾಹಿತಿಗಳು, ಲೇಖಕರು ಸೊಲ್ಲೆತ್ತದಿರುವ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ವಾಟಾಳ್, ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಪ್ರಶ್ನಿಸದಿರುವ ವಿರೋಧ ಪಕ್ಷಗಳು ಸತ್ತಿವೆ ಎಂದು ವ್ಯಂಗ್ಯವಾಡಿದರು.
ದಿನಕರ್ ಅವರ ಪುಸ್ತಕದಿಂದ ರಾಜ್ ಬಿಡುಗಡೆ ಕುರಿತ ಸತ್ಯಸಂಗತಿ ಜನತೆಗೆ ತಿಳಿಯುತ್ತದೆ. ಈ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸರ್ಕಾರ ಯತ್ನಿಸಿದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾತ್ರವಲ್ಲದೆ ಕಾನೂನು ಸಮರ ನಡೆಸುವುದಾಗಿ ವಾಟಾಳ್ ನಾಗರಾಜ್ ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications