ಲಾಲ್ಬಾಗ್ ಪ್ರವೇಶ ಶುಲ್ಕ : ವಾಯು ವಿಹಾರಿಗಳ ಪ್ರತಿಭಟನೆ
ಬೆಂಗಳೂರು : ಲಾಲ್ಬಾಗ್ ಪ್ರವೇಶಕ್ಕೆ ಮುಂಜಾನೆಯ ವಾಯುವಿಹಾರಿಗಳಿಗೆ 1 ರುಪಾಯಿ ಶುಲ್ಕ ವಿಧಿಸುವ ಸರ್ಕಾರದ ನಿರ್ಧಾರವನ್ನು ನೂರಾರು ವಾಯು ವಿಹಾರಾರ್ಥಿಗಳು ವಿರೋಧಿಸಿದ್ದಾರೆ.
ಗುರುವಾರ ಬೆಳಗ್ಗೆ ಲಾಲ್ಬಾಗ್ನ ಗಾಜಿನ ಮನೆ ಮುಂಭಾಗ ಸಭೆ ನಡೆಸಿದ ವಾಯು ವಿಹಾರಾರ್ಥಿಗಳು ಮುಂಜಾನೆ ಲಾಲ್ಬಾಗ್ಗೆ ಪ್ರವೇಶ ಶುಲ್ಕ ವಿಧಿಸುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದರು. ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಮುಂಜಾನೆಯ ವಾಯು ವಿಹಾರ ಮಹತ್ವದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಪ್ರೋತ್ಸಾಹ ನೀಡಬೇಕಾದ ಸರ್ಕಾರವೇ ಪ್ರವೇಶ ಶುಲ್ಕ ಹೇರುವ ಮೂಲಕ ಸಾರ್ವಜನಿಕರ ವಾಯು ವಿಹಾರಕ್ಕೆ ಅಡ್ಡಿ ಮಾಡುತ್ತಿದೆ ಎಂದು ಸಭೆ ಸರ್ಕಾರದ ನಿರ್ಧಾರವನ್ನು ಟೀಕಿಸಿತು.
ಪ್ರವೇಶ ಶುಲ್ಕವನ್ನು ವಾಪಸ್ಸು ತೆಗೆದುಕೊಳ್ಳದಿದ್ದಲ್ಲಿ ಜೂನ್ 30 ರಂದು ಬೆಳಗ್ಗೆ ಲಾಲ್ಬಾಗ್ ಗಾಜಿನ ಮನೆಯ ಎದುರಿಗೆ ಪ್ರತಿಭಟನಾ ಕಾರ್ಯಕ್ರಮ ನಡೆಸುವುದಾಗಿ ಶಾಸಕ ಕೆ.ಎನ್. ಸುಬ್ಬಾರೆಡ್ಡಿ ಹೇಳಿದ್ದಾರೆ. ಈ ಮುನ್ನ 1999 ರಲ್ಲಿ ವಾಯು ವಿಹಾರಾರ್ಥಿಗಳಿಗೆ 2 ರುಪಾಯಿ ಪ್ರವೇಶ ಶುಲ್ಕವನ್ನು ವಿಧಿಸಿದ್ದ ಸರ್ಕಾರ, ಸಾರ್ವಜನಿಕರ ಪ್ರತಿಭಟನೆಯಿಂದ ತನ್ನ ನಿರ್ಧಾರ ಕೈಬಿಟ್ಟದ್ದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications