ಆಟೋ ಚಾಲಕರ ಹಠಾತ್ ಮುಷ್ಕರ; ಪೊಲೀಸರ ಲಾಠಿ ಪ್ರಹಾರ
ಬೆಂಗಳೂರು : ಕನ್ನಡ ಸಂಖ್ಯಾ ಫಲಕ ಹಾಕುವ ಆಟೋ ಚಾಲಕರಿಗೆ ಬೆಂಗಳೂರು ಸಂಚಾರಿ ಪೊಲೀಸರು ನೀಡುತ್ತಿರುವ ಕಿರುಕುಳವನ್ನು ಪ್ರತಿಭಟಿಸಿ ಮೆಜೆಸ್ಟಿಕ್ ಪ್ರದೇಶದಲ್ಲಿ ಬುಧವಾರ ಹಠಾತ್ ಮುಷ್ಕರ ನಡೆಸಿದ ಆಟೋ ಚಾಲಕರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು.
ಈ ಘಟನೆಯಿಂದಾಗಿ ಬುಧವಾರ ಮಧ್ಯಾಹ್ನ ಕೆಂಪೇಗೌಡ ಬಸ್‌ನಿಲ್ದಾಣ ಪ್ರದೇಶದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿತ್ತಲ್ಲದೆ, ಸಂಚಾರ ಹಲವು ಗಂಟೆಗಳ ಕಾಲ ಅಸ್ತವ್ಯಸ್ತವಾಗಿತ್ತು. ಸದಾ ಏನಾದರೂ ಒಂದು ಕಾರಣ ಹೇಳಿ ಕಿರುಕುಳ ನೀಡುವ ಬೆಂಗಳೂರು ಸಂಚಾರಿ ಪೊಲೀಸರು ಈಗ ಕನ್ನಡ ಸಂಖ್ಯಾಫಲಕ ಹಾಕಿದ ಆಟೋ ಚಾಲಕರಿಗೆ ಉಪದ್ರವ ನೀಡುತ್ತಿದ್ದಾರೆ ಎಂದು ಆರೋಪಿಸಿ, ಆಟೋ ಚಾಲಕರು ರೈಲ್ವೆ ನಿಲ್ದಾಣದ ಎದುರು ಸಂಚಾರ ಸ್ಥಗಿತಗೊಳಿಸಿ ಮುಷ್ಕರ ಹೂಡಿದರು.
ಇದರಿಂದಾಗಿ ಮೆಜೆಸ್ಟಿಕ್ ಪ್ರದೇಶದಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಮುಷ್ಕರ ಹಿಂದಕ್ಕೆ ಪಡೆಯುವಂತೆ ಕೋರಿದರೂ ಫಲಕಾರಿಯಾಗಲಿಲ್ಲ. ಪೊಲೀಸರು ಕನ್ನಡ ಸಂಖ್ಯಾಫಲಕ ಹಾಕಿರುವ ಆಟೋ ಚಾಲಕರಿಗೆ ಕಿರುಕುಳ ನೀಡುವುದಿಲ್ಲ ಎಂಬ ಭರವಸೆ ದೊರೆಯುವವರೆಗೂ ತಾವು ಹೋರಾಟ ನಡೆಸುವುದಾಗಿ ಆಟೋಚಾಲಕರು ಪಟ್ಟು ಹಿಡಿದರು.
ಜೈ ಕರ್ನಾಟಕ ಮಾತೆ, ಜೈ ಭುವನೇಶ್ವರಿ, ಪೊಲೀಸರಿಗೆ ಧಿಕ್ಕಾರ ಎಂಬ ಘೋಷಣೆಗಳು ಮೊಳಗಿದವು. ಕೆಲವು ಚಾಲಕರು ಕಲ್ಲು ತೂರಾಟದಲ್ಲಿ ನಿರತರಾದರು. ಪೊಲೀಸರ ಲಾಠಿಗಳು ಗರಿಗೆದರಿದವು, ಪೊಲೀಸರ ಬೂಟುಗಳು ವಿಜೃಂಭಿಸಿದವು. ಏಟು ತಿಂದ ಚಾಲಕರು ದಿಕ್ಕಾಪಾಲಾಗಿ ಓಡಿದರು. ಈ ಲಾಠಿ ಪ್ರಹಾರದ ಸಂದರ್ಭದಲ್ಲಿ ಹಲವು ಆಟೋ ಚಾಲಕರು ಗಾಯಗೊಂಡಿದ್ದಲ್ಲದೆ, ಹತ್ತಾರು ಆಟೋಗಳೂ ಜಖಂಗೊಂಡವು.
ಪೊಲೀಸರು ಮುಷ್ಕರ ಸಂಬಂಧ 20 ಮಂದಿ ಆಟೋ ಚಾಲಕರನ್ನು ಬಂಧಿಸಿದ್ದಾರೆ. ಪಶ್ಚಿಮ ವಲಯದ ಡಿಸಿಪಿ ನಿಸ್ಸಾರ್ ಅಹ್ಮದ್ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಸುಮಾರು ಮೂರ್ನಾಲ್ಕು ಗಂಟೆಗಳ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂತು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications