ತಮಿಳುನಾಡಿನಿಂದ ಕರ್ನಾಟಕ ಕಾಡಿಗೆ ಓಡಿ ಬಂದ ವೀರಪ್ಪನ್!
ಮೈಸೂರು: ವೀರಪ್ಪನ್ ವಿರುದ್ಧ ತಮಿಳುನಾಡು ಗಡಿಯಲ್ಲಿ ಕಾರ್ಯಾಚರಣೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ವೀರಪ್ಪನ್ ತನ್ನ ಸಹಚರರೊಂದಿಗೆ ಕರ್ನಾಟಕ ಅರಣ್ಯವನ್ನು ಪ್ರವೇಶಿಸಿದ್ದಾನೆ ಎಂದು ರಾಜ್ಯದ ವಿಶೇಷ ಗುಪ್ತಚಾರ ದಳ, ಎಸ್.ಟಿ.ಎಫ್.ಗೆ ಮಾಹಿತಿ ನೀಡಿದೆ.
ಸೋಮವಾರ ಮಧ್ಯ ರಾತ್ರಿಯ ನಂತರ - ಮಂಗಳವಾರ ನಸುಕಿನ ಅವಧಿಯಲ್ಲಿ ವೀರಪ್ಪನ್ ತನ್ನ ತಂಡದೊಂದಿಗೆ ಕರ್ನಾಟಕ ಕಾಡನ್ನು ಪ್ರವೇಶಿಸಿದ್ದಾನೆ ಎಂಬ ಸ್ಪಷ್ಟ ಸುಳಿವು ದೊರೆತಿರುವ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ರಾಜ್ಯದ ವ್ಯಾಪ್ತಿಯಲ್ಲಿರುವ ಎಲ್ಲ ಎಸ್ಟಿಎಫ್ ಶಿಬಿರಗಳಿಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.
ದಿಂಬಂ, ಮೆಟ್ಟೂರು ಅರಣ್ಯ ಪ್ರದೇಶದಲ್ಲಿ ಜೂನ್ 21ರಿಂದಲೇ ಕಾರ್ಯಾಚರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವೀರಪ್ಪನ್ಗೆ ಕರ್ನಾಟಕ ಕಾಡಿಗೆ ಪಲಾಯನ ಮಾಡದೆ ವಿಧಿಯೇ ಇರಲಿಲ್ಲ ಎನ್ನಲಾಗಿದೆ. ಲಾರಿಯಾಂದರಲ್ಲಿ ಗೇರು ಮಾಳಂ ಮಾರ್ಗವಾಗಿ ಕತ್ತಲಲ್ಲಿ ತಪ್ಪಿಸಿಕೊಂಡು ಬಂದಿರುವ ವೀರಪ್ಪನ್ ಸಹಚರರು ಪ್ರಸ್ತುತ ಬೈಲೂರು ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿರಬಹುದು ಎಂದು ಶಂಕಿಸಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications