ಚೆನ್ನೈನಲ್ಲಿ ಪತ್ರಕರ್ತರ ಬಂಧನ : ಬೆಂಗಳೂರಿನಲ್ಲಿ ಪ್ರತಿಭಟನೆ
ಬೆಂಗಳೂರು : ಸನ್ ಟಿವಿ ವರದಿಗಾರ ಜಿ. ಸುರೇಶ್ ಅವರನ್ನು ತಮಿಳುನಾಡು ಪೊಲೀಸರು ಅಕ್ರಮವಾಗಿ ಬಂಧಿಸಿರುವುದನ್ನು ವಿರೋಧಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಪತ್ರಕರ್ತರು ಶುಕ್ರವಾರ ನಗರದ ಎಂ.ಜಿ.ರಸ್ತೆಯ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ಪತ್ರಕರ್ತರು ತಮಿಳುನಾಡು ಸರ್ಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಂಧಿತ ಪತ್ರಕರ್ತನನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಪತ್ರಕರ್ತರು, ಈ ಸಂಬಂಧ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಚೆನ್ನೈ: ಪ್ರತಿಭಟಿಸಿದ 150 ಪತ್ರಕರ್ತರ ಬಂಧನ
ಸನ್ಟಿವಿ ಪತ್ರಕರ್ತನ ಬಂಧನವನ್ನು ವಿರೋಧಿಸಿ ಶುಕ್ರವಾರ ಚೆನ್ನೈನಲ್ಲಿ ಪ್ರತಿಭಟನೆ ನಡೆಸಿದ ತಮಿಳುನಾಡಿನ 150 ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಸುಷ್ಮಾ ಪ್ರತಿಕ್ರಿಯೆ ಇಲ್ಲ
ಚೆನ್ನೈನಲ್ಲಿ ಪತ್ರಕರ್ತರ ಬಂಧನದ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವೆ ಸುಷ್ಮಾ ಸ್ವರಾಜ್ ನಿರಾಕರಿಸಿದ್ದಾರೆ. ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಸಂಬಂಧ ಬೆಂಗಳೂರಿಗೆ ಆಗಮಿಸಿದ್ದ ಅವರನ್ನು ಪ್ರಕರಣದ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ- ಯಾವುದೇ ಪ್ರತಿಕ್ರಿಯೆಗೆ ಇದು ಸರಿಯಾದ ಸಮಯವಲ್ಲ , ಆದರೆ ಪತ್ರಿಕಾ ಸ್ವಾತಂತ್ರ್ಯ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications