ಸೋಮವಾರ ತಮಿಳುನಾಡು ಬಂದ್, ರಾಷ್ಟ್ರಪತಿ ಆಳ್ವಿಕೆಗೆ ಆಗ್ರಹ
ಚೆನ್ನೈ : ಡಿಎಂಕೆ ಧುರೀಣ ಎಂ. ಕರುಣಾನಿಧಿ ಅವರ ಬಂಧನವನ್ನು ಪ್ರತಿಭಟಿಸಿ ಜುಲೈ 2 ರ ಸೋಮವಾರ ತಮಿಳುನಾಡು ಬಂದ್‌ಗೆ ಡಿಎಂಕೆ ಮೈತ್ರಿಕೂಟ ಕರೆ ಕೊಟ್ಟಿದೆ ಹಾಗೂ ಸಂವಿಧಾನದ 356 ನೇ ವಿಧಿಯನ್ವಯ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಚೆನ್ನೈನ ಡಿಎಂಕೆ ಮುಖ್ಯ ಕಚೇರಿಯಲ್ಲಿ ಶನಿವಾರ ನಡೆದ ತುರ್ತು ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಿಎಂಕೆ ಪ್ರಧಾನ ಕಾರ್ಯದರ್ಶಿ ಕೆ.ಅನ್ಬಳಗನ್ ಈ ವಿಷಯ ತಿಳಿಸಿದರು. ಜಯಲಲಿತಾ ನೇತೃತ್ವದ ಸರ್ಕಾರದ ಅರಣ್ಯ ಆಳ್ವಿಕೆಯಿಂದ ರಾಜ್ಯದಲ್ಲಿ ಅರಾಜಕತೆ ಉಂಟಾಗಿದ್ದು ರಾಷ್ಟ್ರಪತಿ ಆಳ್ವಿಕೆ ಅನಿವಾರ್ಯ ಎಂದು ಅವರು ಹೇಳಿದರು.
ರಾಜ್ಯದ ಎನ್‌ಡಿಎ ನಿಯೋಗವೊಂದು ಸದ್ಯದಲ್ಲಿಯೇ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ಹಾಗೂ ಪ್ರಧಾನಿ ವಾಜಪೇಯಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಅನ್ಬಳಗನ್ ಹೇಳಿದರು. ಈ ನಡುವೆ ತಮಿಳುನಾಡಿನಲ್ಲಿನ ವಿದ್ಯಮಾನಗಳ ಬಗ್ಗೆ ಚರ್ಚಿಸಲು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ತುರ್ತು ಸಭೆ ಕರೆದಿದೆ.
ಅಂಜುವುದಿಲ್ಲ , ಹೋರಾಟಕ್ಕೆ ಸಿದ್ಧ
ನ್ಯಾಯಾಂಗ ಹೋರಾಟಕ್ಕೆ ಸಿದ್ಧವಾಗಿರುವುದಾಗಿ ಪ್ರಕಟಿಸಿರುವ ಕರುಣಾನಿಧಿ ಪುತ್ರ ಹಾಗೂ ಚೆನ್ನೈ ಮೇಯರ್ ಸ್ಟಾಲಿನ್, ಜಯಲಲಿತಾ ಅವರ ದಬ್ಬಾಳಿಕೆಗೆ ತಾವು ಅಂಜುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ತಾನ್ಸಿ ಮುಂತಾದ ಪ್ರಕರಣಗಳಲ್ಲಿ ತಮ್ಮ ವಿರುದ್ಧ ಬಂದಿರುವ ತೀರ್ಪುಗಳನ್ನು ಮರೆ ಮಾಚಲು ಹಾಗೂ ತಮ್ಮ ಭ್ರಷ್ಟಾಚಾರ ಕರ್ಮಕಾಂಡಗಳನ್ನು ಮುಚ್ಚಿಹಾಕುವ ಸಂಚಿನಿಂದ ಮುಖ್ಯಮಂತ್ರಿ ಜಯಲಲಿತಾ ಪ್ರತೀಕಾರ ಕ್ರಮಕ್ಕೆ ಇಳಿದಿದ್ದಾರೆ ಎಂದು ಸ್ಟಾಲಿನ್ ಆಪಾದಿಸಿದ್ದಾರೆ.
ಕಲ್ಲು ತೂರಾಟ, ಚೆನ್ನೈನಲ್ಲಿ ಬಿಗು ವಾತಾವರಣ
ಕರುಣಾನಿಧಿಯವರನ್ನು ಇರಿಸಿರುವ ಚೆನ್ನೈನ ಸೆಂಟ್ರಲ್ ಜೈಲ್ ಮುಂಭಾಗ ಡಿಎಂಕೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ಈ ನಡುವೆ ಚೆನ್ನೈನಲ್ಲಿ ಉದ್ರಿಕ್ತ ಪರಿಸ್ಥಿತಿ ಮುಂದುವರಿದಿದೆ. ಅಲ್ಲಲ್ಲಿ ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ. ಕಲ್ಲು ತೂರಾಟದಿಂದ ಅನೇಕ ವಾಹನಗಳು ಜಖಂಗೊಂಡಿದ್ದು , ಕೆಲವರು ಗಾಯಗೊಂಡಿದ್ದಾರೆ.
(ಏಜೆನ್ಸೀಸ್)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications