ಕರುಣಾನಿಧಿಯನ್ನು ಎಳೆದೊಯ್ದ ಪೊಲೀಸ್, ಗಾಯಾಳು ಮಾರನ್ ಆಸ್ಪತ್ರೆಗೆ
ಚೆನ್ನೆ : ಫ್ಲೈ ಓವರ್ ಅವ್ಯವಹಾರ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಎಂ. ಕರುಣಾನಿಧಿ ಅವರನ್ನು ಸಿಐಡಿ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಬೆಳಗ್ಗೆ 2 ಗಂಟೆ ಸುಮಾರಿಗೆ 78 ವರ್ಷದ ಹಿರಿಯ ರಾಜಕಾರಣಿ ಕರುಣಾನಿಧಿ ಅವರನ್ನು, ಅವರ ಗೋಪಾಲಪುರಂ ನಿವಾಸದಲ್ಲಿ ಬಂಧಿಸಲಾಯಿತು. ಕರುಣಾನಿಧಿ ಅವರನ್ನು ಬಂಧಿಸುವ ಸಮಯದಲ್ಲಿ ಅಡ್ಡಿ ಮಾಡಿದ ಕೇಂದ್ರ ಸಚಿವ ಮುರಸೋಳಿ ಮಾರನ್ ಅವರನ್ನು ಪೊಲೀಸರು ಥಳಿಸಿದ್ದು , ಗಾಯಗೊಂಡಿರುವ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಂಧನದ ಸಮಯದಲ್ಲಿ ಕರುಣಾನಿಧಿ ಅವರೊಂದಿಗೆ ಒರಟಾಗಿ ನಡೆದುಕೊಂಡಿರುವ ಪೊಲೀಸರು, ಅವರನ್ನು ಅನಾಮತ್ತು ಎಳೆದುಕೊಂಡು ಹೋಗಿದ್ದಾರೆ ಎಂದು ಚೆನ್ನೈ ವರದಿಗಳು ತಿಳಿಸಿವೆ. ಪೊಲೀಸರು ಎಳೆದೊಯ್ಯುವಾಗ ಕರುಣಾನಿಧಿ ಅವರು ಭಯದಿಂದ ಚೀರುತ್ತಿದ್ದರು ಎಂದು ಸನ್ ಟಿವಿ ವರದಿ ತಿಳಿಸಿದೆ.
ಮಾಜಿ ಮುಖ್ಯಮಂತ್ರಿಯನ್ನು ಬಂಧಿಸುವ ಪ್ರಕರಣವನ್ನು ಚಿತ್ರೀಕರಿಸಲು ಹೋದ ಪತ್ರಕರ್ತರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಫ್ಲೈ ಓವರ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರುಣಾನಿಧಿ ಅವರ ಪುತ್ರ ಹಾಗೂ ಚೆನ್ನೈ ಮೇಯರ್ ಸ್ಟಾಲಿನ್ ಪೊಲೀಸರಿಗೆ ಶರಣಾಗಿದ್ದಾರೆ.
(ಯುಎನ್ಐ)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications