ಕರುಣಾನಿಧಿ ಬಂಧನಾ ನಂತರದ ಪರಿಸ್ಥಿತಿ : ಕೇಂದ್ರ ಸಂಪುಟ ಸಭೆ
ನವದೆಹಲಿ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಬಂಧನಾ ನಂತರದ ತಮಿಳುನಾಡು ವಿಧ್ಯಮಾನಗಳ ಬಗ್ಗೆ ಚರ್ಚಿಸಲು ಕೇಂದ್ರ ಸಚಿವ ಸಂಪುಟದ ಸಭೆ ಈ ಹೊತ್ತು ದೆಹಲಿಯಲ್ಲಿ ನಡೆಯುತ್ತಿದೆ. ಕರುಣಾನಿಧಿ ಅವರ ಬಂಧನಕ್ಕೆ ಸರ್ವತ್ರ ವಿರೋಧ ಕೇಳಿಬಂದಿದೆ.
ಬಹುತೇಕ ಎಲ್ಲ ರಾಜ್ಯಕೀಯ ಪಕ್ಷಗಳೂ ಪಕ್ಷಭೇದ ಮರೆತು ಇದನ್ನು ರಾಯಕೀಯ ಪ್ರತೀಕಾರದ ಕ್ರಮ ಎಂದು ಜರಿದಿವೆ. ಈ ಮಧ್ಯೆ ಎನ್.ಡಿ.ಎ. ಸಂಚಾಲಕ ಜಾರ್ಜ್ ಫರ್ನಾಂಡಿಸ್ ನೇತೃತ್ವದ ಮೂವರು ಸದಸ್ಯರ ನಿಯೋಗ ಚೆನ್ನೈಗೆ ಬಂದಿಳಿದಿದ್ದು, ಪರಿಸ್ಥಿತಿಯ ಖುದ್ದು ಅಧ್ಯಯನ ನಡೆಸುತ್ತಿದೆ.
ಹಿರಿಯ ರಾಜಕೀಯ ನಾಯಕರಾದ ದಿಂಡ್ಸೆ ಹಾಗೂ ಮಲ್ಹೋತ್ಸಾ ಅವರೊಂದಿಗೆ ಭಾನುವಾರ ಚೆನ್ನೈಗೆ ಆಗಮಿಸಿದ ಜಾರ್ಜ್ ಫರ್ನಾಂಡಿಸ್ ಅವರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ತಾವು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಜೆ. ಜಯಲಲಿತಾ ಅವರನ್ನು ಭೇಟಿ ಮಾಡುವುದಿಲ್ಲ ಎಂದು ಹೇಳಿದರು.
ಕೇಂದ್ರ ಸಚಿವರಾದ ಟಿ.ಆರ್. ಬಾಲು, ಮುರಸೋಳಿ ಮಾರನ್ ಹಾಗೂ ಎಂ. ಕರುಣಾನಿಧಿ ಅವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಅವರು ತಿಳಿಸಿದರು. ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗುತ್ತದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಾರ್ಜ್ ಫರ್ನಾಂಡಿಸ್, ಕೇಂದ್ರ ಸಚಿವ ಸಂಪುಟ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಆನಂತರ ಜೈಲಿಗೆ ತೆರಳಿ ಕರುಣಾನಿಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಕೇಂದ್ರಕ್ಕೆ ವರದಿ : ಈ ಮಧ್ಯೆ ಕೇಂದ್ರ ಸರಕಾರದ ಸೂಚನೆಯಂತೆ ತಮಿಳುನಾಡಿನ ರಾಜ್ಯಪಾಲರಾದ ಫಾತಿಮಾ ಬೀವಿ ಅವರು ತಮಿಳ ನಾಡಿನ ವಿದ್ಯಮಾನಗಳ ಸಂಪೂರ್ಣ ವರದಿಯನ್ನು ಭಾನುವಾರ ಬೆಳಗ್ಗೆ 9 ಗಂಟೆಗೆ ಕೇಂದ್ರ ಸರಕಾರಕ್ಕೆ ರವಾನಿಸಿದರು. ಈ ಹಿನ್ನೆಲೆಯಲ್ಲಿ ಈ ಹೊತ್ತು ನಡೆಯುತ್ತಿರುವ ಸಚಿವ ಸಂಪುಟದ ಸಭೆಗೆ ಮಹತ್ವ ಬಂದಿದೆ.
ಎನ್‌ಡಿಎ ಅಂಗಪಕ್ಷವಾದ ಡಿ.ಎಂ.ಕೆ. ವಿರುದ್ಧ ಜಯಲಲಿತಾ ಅವರು ಕೈಗೊಂಡಿರುವ ರಾಜಕೀಯ ಪ್ರತಿಕಾರದ ಕ್ರಮ ಹಾಗೂ ಕೇಂದ್ರದ ಸಚಿವರಿಬ್ಬರ ಮೇಲೆ ನಡೆದ ದೌರ್ಜನ್ಯದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯು ಕಠಿಣ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳೂ ಇವೆ. ಜಯಲಲಿತಾ ಸರಕಾರದ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ತೆಲುಗು ದೇಶಂ ಪಕ್ಷ ಒತ್ತಾಯಿಸಿದೆ.
(ಇನ್‌ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications