ತಮಿಳುನಾಡು ಬಂದ್ !ವಿರಳ ಸಂಚಾರ, ವ್ಯಾಪಕ ಪೊಲೀಸ್
ಚೆನ್ನೈ : ಪಳೆಯುಳಿಕೆಗಳಂತೆ ವಿರಳ ವಾಹನ ಸಂಚಾರ, ಜಸ ಸಂಚಾರವೂ ವಿರಳ, ಚಟುವಟಿಕೆ ಕಾಣದ ಶಾಲೆ ಕಾಲೇಜು, ಅಂಗಡಿ ಮುಂಗಟ್ಟುಗಳಿಗೆ ಸ್ವಘೋಷಿತ ರಜೆ- ಇದು ಸೋಮವಾರದ ಮುಂಜಾವಿನ ತಮಿಳುನಾಡಿನ ರಾಜಧಾನಿ. ಡಿಎಂಕೆ ಧುರೀಣ ಎಂ. ಕರುಣಾನಿಧಿ ಹಾಗೂ ಇಬ್ಬರು ಕೇಂದ್ರ ಸಚಿವರ ಬಂಧನವನ್ನು ವಿರೋಧಿಸಿ ಮತ್ತು ಕರುಣಾನಿಧಿ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಎನ್‌ಡಿಎ ಕರೆ ಕೊಟ್ಟಿರುವ ಬಂದ್‌ಗೆ ಪ್ರತಿಕ್ರಿಯೆಯಿದು.
ಬೆಳಗ್ಗೆ ಬಸ್ ಸಂಚಾರ ಕಡಿಮೆಯಿದ್ದರೂ, ಬಿಸಿಲೇರಿದಂತೆ ಸಂಚಾರ ಎಂದಿನಂತಿರುತ್ತದೆ ಎಂದು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರದ ಮೂಲಗಳು ತಿಳಿಸಿವೆ. ಬಂದ್ ಕಾರಣವಾಗಿ ಸಂಭವಿಸಬಹುದಾದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ವ್ಯಾಪಕ ಬಂದೋಬಸ್ತ್ ಕಲ್ಪಿಸಲಾಗಿದೆ. ನಾಗರಿಕರಿಗೆ ಬಂದ್‌ನ ಬಿಸಿ ತಟ್ಟದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಅಗತ್ಯವಾದ ಎಲ್ಲ ಕ್ರಮಗಳನ್ನೂ ಸರ್ಕಾರ ಕೈಗೊಂಡಿದೆ.
ಬಂದ್ ಕಾಲದಲ್ಲಿ ರಸ್ತೆಗಿಳಿದು ಕಾನೂನು ಭಂಗ ಚಟುವಟಿಕೆಗಳಲ್ಲಿ ತೊಡಗುವವರಿಗೆ ಕಂಡಲ್ಲಿ ಗುಂಡಿಕ್ಕಲು ಚೆನ್ನೈ ಪೊಲೀಸ್ ಕಮೀಷನರ್ ಕೆ.ಮುತ್ತುಕಾರುಪ್ಪನ್ ಆದೇಶ ಹೊರಡಿಸಿದ್ದಾರೆ. ಬಂದ್ ಕಾರಣವಾಗಿ ಬಹುತೇಕ ಶಾಲಾ ಕಾಲೇಜುಗಳು ಮುಚ್ಚಿವೆ. ರೈಲ್ವೆ ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಈ ನಡುವೆ ಮುನ್ನೆಚ್ಚರಿಕೆ ಕ್ರಮವಾಗಿ ಕೇರಳ ಹಾಗೂ ಆಂಧ್ರಪ್ರದೇಶಗಳು ತಮಿಳುನಾಡಿಗೆ ಹೋಗುವ ಬಸ್‌ಗಳ ಸಂಚಾರವನ್ನು ರದ್ದುಪಡಿಸಿವೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications