ತಮಿಳುನಾಡಿನ ರಾಜ್ಯಪಾಲರಾಗಿ ಬಿಜೆಪಿಯ ಸಿಕಂದರ್ ಭಕ್ತ್?
ನವದೆಹಲಿ : ತೆರವಾದ ಫಾತಿಮಾ ಬೀವಿ ಅವರ ಸ್ಥಾನದಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸಿಕಂದರ್ ಭಕ್ತ್ ನೇಮಕಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ.
ಪ್ರಸ್ತುತ ಆಂಧ್ರಪ್ರದೇಶದ ರಾಜ್ಯಪಾಲ ಸಿ.ರಂಗರಾಜನ್ ಅವರು ತಮಿಳುನಾಡಿನ ರಾಜ್ಯಪಾಲರಾಗಿ ಹೆಚ್ಚುವರಿ ಹೊಣೆ ಹೊತ್ತಿದ್ದು, ಆ ಸ್ಥಾನವನ್ನು ತುಂಬುವಲ್ಲಿ ಸಿಕಂದರ್ ಭಕ್ತ್ ಹಾಗೂ ಮಹಾರಾಷ್ಟ್ರದ ರಾಜ್ಯಪಾಲ ಪಿ.ಸಿ. ಅಲೆಕ್ಸಾಂಡರ್ ಅವರ ಹೆಸರುಗಳು ಕೇಳಿಬರುತ್ತಿವೆ. ಪ್ರಸ್ತುತ ವಿದೇಶ ಪ್ರವಾಸದಲ್ಲಿರುವ ಗೃಹ ಸಚಿವ ಎಲ್.ಕೆ.ಅಡ್ವಾಣಿ ವಾಪಸ್ಸಾದ ನಂತರ ತಮಿಳುನಾಡು ರಾಜ್ಯಪಾಲರ ನೇಮಕವನ್ನು ಅಂತಿಮಗೊಳಿಸಲಾಗುವುದು.
ಫಾತಿಮಾ ಬೀವಿ ಅವರ ನಿರ್ಗಮನದಿಂದ ಅಸಮಾಧಾನಗೊಂಡಿರುವ ಮುಸ್ಲಿಂರನ್ನು ಸಮಾಧಾನಗೊಳಿಸಲು ಅದೇ ಕೋಮಿನ ಭಕ್ತ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿಸಲು ಬಿಜೆಪಿಯ ಚಿಂತಕರ ಚಾವಡಿ ಉತ್ಸುಕವಾಗಿದೆ ಎಂದು ದೆಹಲಿಯ ರಾಜಕೀಯ ಮೂಲಗಳು ತಿಳಿಸಿವೆ. ಈ ಕ್ರಮ, ಕ್ಯಾಬಿನೆಟ್ನಲ್ಲಿ ಸ್ಥಾನ ಸಿಗದ ಭಕ್ತ್ ಅವರನ್ನು ಸಮಾಧಾನಗೊಳಿಸುವ ಕ್ರಮವೆಂದೂ ವಿಶ್ಲೇಷಿಸಲಾಗುತ್ತಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications