ಕೇಂದ್ರ ಸಚಿವರಾದ ಮುರಸೋಳಿ ಮಾರನ್, ಬಾಲು ಬಿಡುಗಡೆ
ಚೆನ್ನೈ : ಕೇಂದ್ರ ಸಚಿವರಾದ ಮುರಸೋಳಿ ಮಾರನ್ ಹಾಗೂ ಟಿ.ಆರ್. ಬಾಲು ಅವರು ಸೋಮವಾರ ಸಂಜೆ ಪೊಲೀಸ್ ಕಸ್ಟಡಿಯಿಂದ ಬಿಡುಗಡೆ ಆಗಿದ್ದಾರೆ. ಈ ಇಬ್ಬರು ಸಚಿವರನ್ನು ತತ್ಕ್ಷಣವೇ ಬಿಡುಗಡೆ ಮಾಡುವಂತೆ ಇಲ್ಲಿನ 18ನೇ ಮೆಟ್ರೋಪಾಲಿಟಿನ್ ನ್ಯಾಯಾಲಯ ಆದೇಶಿಸಿತ್ತು.
ಪ್ರಾಥಮಿಕ ವಿಚಾರಣೆ ಮುಗಿದಿದ್ದು ಸಚಿವರನ್ನು ಬಿಡುಗಡೆಗೊಳಿಸಲು ತಮ್ಮ ಅಭ್ಯಂತರವೇನಿಲ್ಲ ಎಂದು ತಮಿಳುನಾಡು ಪೊಲೀಸರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಧೀಶರಾದ ಎನ್. ರಾಜಲಕ್ಷ್ಮೀ ಅವರು, ಕೂಡಲೇ ಇಬ್ಬರೂ ಸಚಿವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದರು. ಮಾರನ್ ಹಾಗೂ ಟಿ.ಆರ್. ಬಾಲು ಅವರು ಸರಕಾರಿ ಅಧಿಕಾರಿಗಳಿಗೆ (ಪೊಲೀಸರಿಗೆ) ತಮ್ಮ ಕರ್ತವ್ಯ ಮಾಡಲು ಅಡ್ಡಿಯುಂಟು ಮಾಡಿದರು ಎಂಬ ಆರೋಪದ ಮೇಲೆ ಶನಿವಾರ ಅವರನ್ನು ಬಂಧಿಸಲಾಗಿತ್ತು.
ಮಾರನ್ ಅವರು ಅಪೊಲೋ ಆಸ್ಪತ್ರೆಯಲ್ಲೂ, ಟಿ.ಆರ್. ಬಾಲು ಅವರು ವೆಲ್ಲೂರು ಜೈಲಿನಲ್ಲೂ ಬಂಧಿಗಳಾಗಿದ್ದರು. ಮಾರನ್ ಅವರ ವಿರುದ್ಧ ಪೊಲೀಸರು ಮೂರು ವಿವಿಧ ಮೊಕದ್ದಮೆಗಳನ್ನು ದಾಖಲಿಸಿಕೊಂಡಿದ್ದರೆ, ಬಾಲು ಅವರ ವಿರುದ್ಧ ಎರಡು ಮೊಕದ್ದಮೆಗಳು ದಾಖಲಾಗಿವೆ. ಈ ಮಧ್ಯೆ ಜಾಮೀನಿನ ಮೇಲೆ ಬಿಡುಗಡೆಯಾಗಲು ಕರುಣಾನಿಧಿ ಅವರು ನಿರಾಕರಿಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ತಮ್ಮ ವಿರುದ್ಧ ಇರುವ ಎಲ್ಲ ಮೊಕದ್ದಮೆಗಳನ್ನು ನ್ಯಾಯಾಲಯದಲ್ಲಿ ಎದುರಿಸಲು ತಾವು ಸಿದ್ಧರಾಗಿರುವುದಾಗಿ ಅವರು ಪ್ರಕಟಿಸಿದ್ದಾರೆ.
ಇಬ್ಬರು ಕೇಂದ್ರ ಸಚಿವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ಕೇಂದ್ರ ಸರಕಾರವು ಎರಡು ನಿಯೋಗಗಳನ್ನು ಸತ್ಯಶೋಧನೆಗಾಗಿ ಚೆನ್ನೈಗೆ ಕಳುಹಿಸಿತ್ತು. ಈ ಮಧ್ಯೆ ಕೇಂದ್ರಕ್ಕೆ ಸೂಕ್ತ ಸಮಯದಲ್ಲಿ ಸರಿಯಾದ ವರದಿ ನೀಡದ ತಮಿಳುನಾಡು ರಾಜ್ಯಪಾಲರನ್ನೂ ಪದಚ್ಯುತಗೊಳಿಸಲಾಯಿತು ಎಂಬುದನ್ನು ಇಲ್ಲಿ ಸ್ಮರಿಸಬಹುದು.
ಮುಖಪುಟ / ಇವತ್ತು... ಈ ಹೊತ್ತು...-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications