ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಪ್ರಗತಿಗಾಗಿ ವಿಶೇಷ ಯೋಜನೆ
ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ಶೈಕ್ಷಣಿಕವಾಗಿ ಅತ್ಯಂತ ಶೋಚನೀಯ ಸ್ಥಿತಿಯಲ್ಲಿರುವ ಗುಲ್ಬರ್ಗಾ, ರಾಯಚೂರು, ಕೊಪ್ಪಳ, ಬೀದರ್, ಬಳ್ಳಾರಿ, ಬಿಜಾಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ಈ ಭಾಗದಲ್ಲಿ ಪ್ರತ್ಯೇಕ ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯ ಸ್ಥಾಪಿಸಲು ಸೋಮವಾರ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ ತೀರ್ಮಾನಿಸಿತು.
ಶಿಕ್ಷಣ ಇಲಾಖೆಗೆ ಸರ್ಕಾರ ನೀಡುವ ಹಣದಲ್ಲಿ ಪ್ರತಿಶತ 50 ರಷ್ಟನ್ನು (ವೇತನ ಹೊರತುಪಡಿಸಿ) ಈ ಜಿಲ್ಲೆಗಳಿಗಾಗಿ ಖರ್ಚು ಮಾಡಲು ಕೂಡ ಉನ್ನತ ಮಟ್ಟದ ಸಭೆ ನಿರ್ಧರಿಸಿದೆ. ಸಭೆಯಲ್ಲಿ ಕೈಗೊಂಡ ಇತರ ನಿರ್ಧಾರಗಳು-
- ಹೊಸದಾಗಿ 8 ಪ್ರಾಥಮಿಕ ಶಾಲೆ, 70 ಪ್ರೌಢಶಾಲೆ ಮಂಜೂರು
- ಹೆಚ್ಚುವರಿಯಾಗಿ ಶಾಲಾ ಕೊಠಡಿಗಳ ನಿರ್ಮಾಣ
- ಈ ಭಾಗದ ಶಾಲೆಗಳಿಗೆ ಅಗತ್ಯವಿರುವ 7500 ಶಿಕ್ಷಕರ ನೇಮಕಕ್ಕೆ ಹಸಿರು ನಿಶಾನೆ
(ಇನ್ಫೋ ವಾರ್ತೆ)