ರಾಜ್ಯದ ಪ್ರತಿ ಇಂಜಿನಿಯರಿಂಗ್ ಕಾಲೇಜಿಗೆ 1 ಕೋಟಿ ರು. ಸಾಫ್ಟ್ವೇರ್
ಬೆಂಗಳೂರು : ರಾಜ್ಯದ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಂಪ್ಯೂಟರ್ ಸಾಫ್ಟ್ವೇರ್ ಶಿಕ್ಷಣ ಅಭಿವೃದ್ಧಿ ಯೋಜನೆ (ಸೀಡ್)ಯನ್ನು ಹಮ್ಮಿಕೊಳ್ಳಲು ಪ್ರಸಿದ್ಧ ‘ರೇಷನಲ್ ಸಾಫ್ಟ್ವೇರ್’ ಕಂಪೆನಿ ನಿರ್ಧರಿಸಿದೆ.
ಈ ಯೋಜನೆಯಡಿಯಲ್ಲಿ ರಾಜ್ಯದ ಪ್ರತಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಒಂದು ಕೋಟಿ ರೂಪಾಯಿ ಮೌಲ್ಯದ ಸಾಫ್ಟ್ವೇರ್ ಒದಗಿಸಲಾಗುವುದು. ಜೊತೆಗೆ ಹೊಸ ಸಾಫ್ಟ್ವೇರ್ಗಳ ಬಗ್ಗೆ ಅಧ್ಯಾಪಕ ವರ್ಗಕ್ಕೆ ಅಗತ್ಯ ತರಬೇತಿ ನೀಡುವ ವ್ಯವಸ್ಥೆಯನ್ನೂ ಕಂಪೆನಿ ಮಾಡಲಿದೆ ಎಂದು ಕಂಪೆನಿಯ ವ್ಯವಸ್ಥಾಪಕ ಎಂ.ಕೆ. ಭರಟ್ಟಿ ಸೋಮವಾರ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.
ಸಾಫ್ಟ್ವೇರ್ ಇಂಜಿನಿಯರಿಂಗ್ ಬಿಡಿ ಭಾಗಗಳ ಪೂರೈಕೆ ಮತ್ತು ಸೇವಾ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ರೇಷನಲ್ ಕಂಪೆನಿ, ಸಾಫ್ಟ್ವೇರ್ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ವೃತ್ತಿ ಪರತೆ ತರುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಉತ್ತಮ ಸಾಫ್ಟ್ವೇರ್ಗಳನ್ನು ಪರಿಚಯಿಸಿ ಪ್ರತಿಭಾವಂತ ಸಾಫ್ಟ್ ವೇರ್ ಇಂಜಿನಿಯರ್ಗಳನ್ನಾಗಿ ತಯಾರು ಮಾಡುವುದು ನಮ್ಮ ಉದ್ದೇಶ ಎಂದು ಭರಟ್ಟಿ ಹೇಳಿದರು.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications