ಕಡುಬಡವರಿಗೆ ಅನ್ನ ,‘ಅಂತ್ಯೋದಯ’ಯೋಜನೆಗೆ ಹಸಿರು ನಿಶಾನೆ
ಬೆಂಗಳೂರು : ಕೇಂದ್ರ ಸರ್ಕಾರದ ನೆರವಿನೊಂದಿಗೆ ರಾಜ್ಯದಲ್ಲಿನ 4.79 ಕಡುಬಡವ ಕುಟುಂಬಗಳಿಗೆ ತಿಂಗಳಿಗೆ 25 ಕೆ.ಜಿ. ಆಹಾರಧಾನ್ಯವನ್ನು ವಿತರಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಂತ್ಯೋದಯ ಅನ್ನ ಯೋಜನೆ’ ಮಂಗಳವಾರ ಪ್ರಾರಂಭವಾಯಿತು.
ಕಡು ಬಡವರ ಹಸಿವನ್ನು ಇಂಗಿಸಲು ರಾಜ್ಯ ಸರ್ಕಾರ ಹಮ್ಮಿಕೊಳ್ಳುವ ಇಂಥಾ ಯೋಜನೆಗಳಿಗೆ ಕೇಂದ್ರದ ನೆರವು ಸದಾ ಇರುತ್ತದೆ ಎಂದು ಯೋಜನೆಯನ್ನು ಉದ್ಘಾಟಿಸಿದ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕ ಸಚಿವ ಶಾಂತಕುಮಾರ್ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಅವರು ಯೋಜನೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ದೇಶದಲ್ಲಿ ಪ್ರಸ್ತುತ 6.04 ಕೋಟಿ ಟನ್ ಆಹಾರ ದಾಸ್ತಾನಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳುವ ದೃಷ್ಟಿಯಿಂದ ಪ್ರಧಾನಿ ವಾಜಪೇಯಿ ಈ ಮಹತ್ವದ ಯೋಜನೆಯನ್ನು ರೂಪಿಸಿದ್ದಾರೆ. ಇಡೀ ದೇಶದಲ್ಲಿ 1 ಕೋಟಿ ಕಡು ಬಡವರಿಗೆ ಈ ಯೋಜನೆ ಅನುಕೂಲ ಕಲ್ಪಿಸಲು ನಿರ್ಧರಿಸಲಾಗಿದ್ದು , ಕರ್ನಾಟಕ ಈ ಯೋಜನೆಯನ್ನು ಪ್ರಾರಂಭಿಸುತ್ತಿರುವ 15 ನೇ ರಾಜ್ಯ ಎಂದು ಶಾಂತಕುಮಾರ್ ಹೇಳಿದರು.
ಕೇಂದ್ರದ ನೆರವಿಗೆ ಕೃಷ್ಣ ಕೃತಜ್ಞತೆ
ಕೋಟ್ಯಾಂತರ ಜನರಿಗೆ ನೆಮ್ಮದಿ ತರುವ ಯೋಜನೆಯಿದು ಎಂದು ಅಂತ್ಯೋದಯ ಅನ್ನ ಯೋಜನೆಯನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಣ್ಣಿಸಿದರು. ಕಳೆದ ವರ್ಷ ಮೆಕ್ಕೆಜೋಳದ ಅಧಿಕ ಉತ್ಪಾದನೆಯಾಗಿದ್ದಾಗ ರಾಜ್ಯದ ನೆರವಿಗೆ ಧಾವಿಸಿದ ಶಾಂತಕುಮಾರ್ ಅವರ ಸಹಾಯವನ್ನು ಕೃಷ್ಣ ಸ್ಮರಿಸಿದರು.
ಕೇಂದ್ರ ಸಚಿವ ವಿ. ಶ್ರೀನಿವಾಸಪ್ರಸಾದ್, ವಿಧಾನ ಪರಿಷತ್‌ನ ವಿರೋಧಿ ಮುಖಂಡ ಕೆ.ಹೆಚ್. ಶ್ರೀನಿವಾಸ್, ರಾಜ್ಯ ಆಹಾರ ಸಚಿವ ಡಿ.ಬಿ. ಇನಾಂದಾರ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications