ಬಿ.ಡಿ.ಎ.ಯಿಂದ ಬೆಂಗಳೂರಿಗರಿಗೆ 5000 ನಿವೇಶನ ಮಂಜೂರು
ಬೆಂಗಳೂರು : 2001ನೇ ವರ್ಷದಲ್ಲಿ ಸುಮಾರು 20 ಸಾವಿರ ನಿವೇಶನಗಳನ್ನು ಬೆಂಗಳೂರಿಗರಿಗೆ ಹಂಚಲು ನಿರ್ಧರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಪ್ರಥಮ ಹಂತವಾಗಿ ಈಗಾಗಲೇ 5 ಸಾವಿರ ನಿವೇಶನಗಳನ್ನು ಮಂಜೂರು ಮಾಡಿದೆ. ಆಗಸ್ಟ್ ಮೊದಲ ವಾರದೊಳಗೆ ಇನ್ನೂ 10 ಸಾವಿರ ನಿವೇಶನಗಳನ್ನು ಹಂಚಲು ಅರ್ಜಿ ಅಹ್ವಾನಿಸಲಿದೆ.
ಈ ವಿಷಯವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜೈಕರ್ ಜರೋಮ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬನಶಂಕರಿ 6ನೇ ಹಂತದ ಯೋಜನೆಯಲ್ಲಿ 10 ಸಾವಿರ ನಿವೇಶನಗಳನ್ನು ವಿಂಗಡಿಸಿ ವಿತರಿಸುವ ಗುರಿ ಪ್ರಾಧಿಕಾರದ ಮುಂದಿದೆ. ವಿಧಾನಸೌಧಕ್ಕೆ ಕೇವಲ 17 ಕಿ.ಮೀಟರ್ ಅಂತರದಲ್ಲಿರುವ ಅಂಜನಾಪುರ ಬಡಾವಣೆಯಲ್ಲಿ ಕೇವಲ ಮೂರು ತಿಂಗಳ ಅವಧಿಯಲ್ಲಿ 5 ಸಾವಿರ ನಿವೇಶನ ಅಭಿವೃದ್ಧಿಪಡಿಸಿ ಹಂಚಲಾಗಿದೆ ಎಂದು ಅವರು ಹೇಳಿದರು.
ಬನಶಂಕರಿ 6ನೇ ಹಂತದ ವಿಸ್ತರಣೆಯಲ್ಲಿ 10 ಸಾವಿರ ನಿವೇಶನ ಹಂಚಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಆಗಸ್ಟ್ ಮೊದಲ ವಾರದಲ್ಲಿ ಅರ್ಜಿ ಕರೆಯಲಾಗುವುದು ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ನಿವೇಶನದ ಮಂಜೂರಾತಿಯ ಜತೆಗೇ ಆಕ್ಷೇಪಣಾ ರಹಿತ ಪತ್ರವನ್ನು ನೀಡಲಾಗುತ್ತದೆ ಎಂದೂ ಅವರು ಹೇಳಿದರು.
ನಿವೇಶನ ಮಂಜೂರಾದ ವ್ಯಕ್ತಿಗಳು ನಿವೇಶನದ ಮೌಲ್ಯವನ್ನು ಸಂದಾಯ ಮಾಡಿದ ಕೂಡಲೇ ಶುದ್ಧ ಕ್ರಯಪತ್ರವನ್ನು ನೀಡುವ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿದೆ. 2001 ಜೂನ್ 30ರವರಗೆ ಸುಮಾರು 9400 ಕ್ರಯಪತ್ರ ವಿತರಿಸಲಾಗಿದೆ ಎಂದು ಅವರು ವಿವರಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications