Get Updates
Get notified of breaking news, exclusive insights, and must-see stories!

ಈ ವರ್ಷ ಎಲ್ಲ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ : ಕೃಷ್ಣ

ಬೆಂಗಳೂರು : ಮಳೆ ಅಭಾವದಿಂದ ಕಡಿಮೆ ಬೆಳೆ, ಬೆಲೆ ಕುಸಿತದಂತಹ ಸಂಕಷ್ಟಗಳಿಂದ ರೈತರನ್ನು ಪಾರು ಮಾಡಲು ಈ ವರ್ಷ ಎಲ್ಲಾ ಕೃಷಿ ಉತ್ಪನ್ನ ಗಳಿಗೂ ಬೆಂಬಲ ಬೆಲೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಸ್‌. ಎಂ. ಕೃಷ್ಣ ತಿಳಿಸಿದ್ದಾರೆ.

ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ‘ರಾಷ್ಟ್ರೀಯ ಮುಸುಕಿನ ಜೋಳ ಮೇಳ’ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರಾಜ್ಯದಲ್ಲಿ ತಲೆದೋರಿರುವ ಬರಗಾಲ ಪರಿಸ್ಥಿತಿಯ ಬಗ್ಗೆ ಹಿರಿಯ ಅಧಿಕಾರಿಗಳು ಜಿಲ್ಲಾವಾರು ಸಮೀಕ್ಷೆ ನಡಸಿದ ನಂತರ, ಜುಲೈ 15ರೊಳಗೆ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಬರದ ಛಾಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರತಿ ಜಿಲ್ಲೆಗೆ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ಕಳುಹಿಸಿ ಅಲ್ಲಿನ ಮಳೆ ಬೆಳೆ ಪರಿಸ್ಥಿತಿಯ ಬಗ್ಗೆ ವರದಿ ತರಿಸಿಕೊಳ್ಳಲಾಗುವುದು. ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದ ಸುಮಾರು ಶೇ 50 ರಷ್ಟು ಪ್ರದೇಶದಲ್ಲಿ ಮುಂಗಾರು ದುರ್ಬಲವಾಗಿರುವುದು ಸರಕಾರಕ್ಕೂ ಆತಂಕವುಂಟುಮಾಡಿದೆ ಎಂದು ಮುಖ್ಯಮಂತ್ರಿಗಳು ಕಳವಳಪಟ್ಟರು.

ಉತ್ತರ ಕರ್ನಾಟಕದ ಪರಿಸ್ಥಿತಿಯ ಅಧ್ಯಯನಕ್ಕೆ ಜುಲೈ 10ರಂದು ತಾವು ಗುಲ್ಬರ್ಗಕ್ಕೆ ಭೇಟಿ ನೀಡುವುದಾಗಿ ತಿಳಿಸಿದ ಕೃಷ್ಣ, ಪ್ರಸ್ತುತ ಬಿತ್ತನೆ ಬೀಜದಿಂದ ಸೂಪರ್‌ ಮಾರುಕಟ್ಟೆಯವರೆಗೆ ಕೃಷಿ ವಲಯವನ್ನು ಸಜ್ಜುಗೊಳಿಸುವ ಅಗತ್ಯವಿದೆ ಎಂದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+