ಗುಲ್ಬರ್ಗಾ ವಿಮಾನ ನಿಲ್ದಾಣ ಜಾಗಕ್ಕೆ ಪ್ರಾಧಿಕಾರದ ಅನುಮೋದನೆ
ಗುಲ್ಬರ್ಗಾ: ಉದ್ದೇಶಿತ ಗುಲ್ಬರ್ಗಾ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಶ್ರೀನಿವಾಸ ಸರದಗಿ ಗ್ರಾಮದ ಬಳಿ ಗುರುತಿಸಲಾಗಿರುವ ಹೊಸ ನಿವೇಶನಕ್ಕೆ ಭಾರತದ ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಅನುಮೋದನೆ ನೀಡಿದೆ. ಈ ವಿಷಯವನ್ನು ರಾಜ್ಯದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಗುರುವಾರ ಇಲ್ಲಿ ತಿಳಿಸಿದ್ದಾರೆ.
ಈ ಹೊಸ ಜಾಗವು ಗುಲ್ಬಾರ್ಗಾ ನಗರದಿಂದ ಕೇವಲ 8 ಕಿ.ಮೀಟರ್ ದೂರದಲ್ಲಿದ್ದು, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಶಸ್ತವಾಗಿದೆ. ಉದ್ದೇಶಿತ ವಿಮಾನ ನಿಲ್ದಾಣದಲ್ಲಿ ಸುಮಾರು 3 ಕಿ.ಮೀಟರ್ ಉದ್ದದ ರನ್ವೇ ಇದ್ದು, ಬೋಯಿಂಗ್, ಏರ್ ಬಸ್ ಮೊದಲಾದ ದೊಡ್ಡ ವಿಮಾನಗಳೂ ಇಲ್ಲಿ ಇಳಿಯಬಹುದಾಗಿದೆ ಎಂದು ಖರ್ಗೆ ಹೇಳಿದರು.
ಇದಕ್ಕೂ ಮುನ್ನ ಆಯ್ಕೆ ಮಾಡಲಾಗಿದ್ದ ಜಾಗವು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಷ್ಟು ಸೂಕ್ತವಾಗಿರಲಿಲ್ಲವಲ್ಲದೆ, ಅಲ್ಲಿ ಚಿಕ್ಕ ವಿಮಾನಗಳು ಮಾತ್ರ ಇಳಿಯಬಹುದಾಗಿತ್ತು ಎಂದು ಖರ್ಗೆ ಹೇಳಿದರು. ಈಗ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ದೊರತಿರುವ ಅನುಮತಿಯಿಂದಾಗಿ ನಿಲ್ದಾಣ ನಿರ್ಮಾಣ ಕಾಮಗಾರಿ ಯೋಜನೆಗೆ ಶೀಘ್ರ ಚಾಲನೆ ದೊರೆಯಲಿದೆ ಎಂದೂ ಅವರು ಹೇಳಿದರು.
ಹಿಂದೆ ಆಯ್ಕೆ ಮಾಡಲಾಗಿದ್ದ ಜಾಗವನ್ನು ಬಡಾವಣೆಯಾಗಿ ಪರಿವರ್ತಿಸಿ, ಅಭಿವೃದ್ಧಿಪಡಿಸಲು ಕರ್ನಾಟಕ ಗೃಹ ನಿರ್ಮಾಣ ಮಂಡಳಿಗೆ ಒಪ್ಪಿಸಲಾಗುವುದು. ಅದಕ್ಕೆ ಪ್ರತಿಯಾಗಿ ಗೃಹ ಮಂಡಳಿಯು ವಿಮಾನ ನಿಲ್ದಾಣಕ್ಕೆ ಹೊಸ ಜಾಗ ಖರೀದಿಗೆ ಹಣ ನೀಡುವುದು ಎಂದೂ ಖರ್ಗೆ ವಿವರಿಸಿದರು.
(ಯು.ಎನ್.ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications