ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 25ರಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಿ ನೌಕರರ ಮುಷ್ಕರ

By Staff
|
Google Oneindia Kannada News

ನವದೆಹಲಿ : ಸಿಬ್ಬಂದಿ ಸಂಖ್ಯೆಯಲ್ಲಿ ಕಡಿತ ಹಾಗೂ ಸರ್ಕಾರಿ ಇಲಾಖೆಗಳ ಖಾಸಗೀಕರಣ ವಿರೋಧಿಸಿ 95 ಲಕ್ಷಕ್ಕೂ ಹೆಚ್ಚು ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು ಜುಲೈ 25ರಂದು ರಾಷ್ಟ್ರಾದ್ಯಂತ ಒಂದು ದಿನದ ಮುಷ್ಕರ ನಡೆಸಲಿದ್ದಾರೆ.

ಮುಷ್ಕರಕ್ಕೆ ಮುನ್ನ ಜುಲೈ 18ರಂದು ಸರ್ಕಾರಿ ನೌಕರರು ಖಾಸಗೀಕರಣ ವಿರೋಧಿ ದಿನವನ್ನಾಗಿ ಆಚರಿಸಲಿದ್ದಾರೆ. ಅಂದು ರಾಷ್ಟ್ರಾದ್ಯಂತ ಪ್ರತಿಭಟನಾ ಪ್ರದರ್ಶನಗಳು, ರ್ಯಾಲಿಗಳನ್ನು ನಡೆಸಲಾಗುವುದು ಎಂದು ಅಖಿಲ ಭಾರತ ಸರ್ಕಾರಿ ನೌಕರರ ಸಂಘ (ಎಜಿಜಿಇಎಫ್‌) ಹಾಗೂ ಕೇಂದ್ರ ಸರ್ಕಾರಿ ಸಿಬ್ಬಂದಿ ಹಾಗೂ ನೌಕರರ ಒಕ್ಕೂಟ ಗುರುವಾರ ಪ್ರಕಟಿಸಿವೆ.

ಖಾಸಗೀಕರಣ, ನಿಗಮೀಕರಣ, ಸರ್ಕಾರಿ ಹುದ್ದೆಗಳನ್ನು ಗುತ್ತಿಗೆ ಹಾಗೂ ದಿನಗೂಲಿ ಉದ್ಯೋಗಗಳಾಗಿ ಪರಿವರ್ತಿಸುವುದು, ಇಲಾಖೆಗಳ ಸಿಬ್ಬಂದಿ ಸಂಖ್ಯೆಯಲ್ಲಿ ಕಡಿತ, ಹುದ್ದೆಗಳನ್ನು ರದ್ದು ಮಾಡುವುದು ಹಾಗೂ ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತರುವ ಸರ್ಕಾರದ ನಿಲುವನ್ನು ಖಂಡಿಸಿ ನೌಕರರು ಈಪ್ರತಿಭಟನೆ ನಡೆಸಲಿದ್ದಾರೆ.

ಜಾಗತೀಕರಣದ ಹೆಸರಿನಲ್ಲಿ ಬಂಡವಾಳಶಾಹಿ ಬಹುರಾಷ್ಟ್ರೀಯ ಕಂಪನಿಗಳಿಗೆ ದೇಶವನ್ನು ಮಾರಲು ಹೊರಟಿದ್ದಾರೆ. ಇದರ ವಿರುದ್ಧ ನಮ್ಮ ದನಿ ಎಂದು ಒಕ್ಕೂಟಗಳು ಪ್ರಕಟಣೆಯಲ್ಲಿ ತಿಳಿಸಿವೆ. ಮುಷ್ಕರದಲ್ಲಿ ಭಾಗವಹಿಸುವ ನೌಕರರಲ್ಲಿ 15 ಲಕ್ಷ ಶಾಲಾ ಶಿಕ್ಷಕರು ಸೇರಿದಂತೆ 80 ಲಕ್ಷ ರಾಜ್ಯ ಸರ್ಕಾರಿ ನೌಕರರೂ ಸೇರಿದ್ದಾರೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X