ಬೆಳಗಾವಿಯಲ್ಲಿ ರೂಪುಗೊಳ್ಳುತ್ತಿರುವ ಬಾಲದ ಬಾವಲಿ ರಕ್ಷಿತಾರಣ್ಯ
ಬೆಳಗಾವಿ: ದೇಶದಲ್ಲೇ ಮೊದಲ ಬಾರಿಗೆ ಮುಕ್ತ ಬಾಲದ ಬಾವಲಿಗಳ ರಕ್ಷಿತಾರಣ್ಯ ಜಿಲ್ಲೆಯಲ್ಲಿ ರೂಪುಗೊಳ್ಳುವ ಸಾಧ್ಯತೆಯಿದೆ. ಭೀಮಗಡ್ ಅರಣ್ಯ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಮಾವಣೆಯಾಗುತ್ತಿರುವ ಬಾವಲಿಗಳು ರಕ್ಷಿತಾರಣ್ಯದ ಬಗೆಗೆ ಆಶಾಭಾವನೆ ಮೂಡಿಸಿವೆ.
ಬಾವಲಿಗಳ ರಕ್ಷಿತಾರಣ್ಯ ಕುರಿತು ರಾಜ್ಯ ಅರಣ್ಯ ಇಲಾಖೆ ಪ್ರಸ್ತಾವನೆಯಾಂದನ್ನು ಅಂತಿಮಗೊಳಿಸಿದೆ. ಅರಣ್ಯ ಮಂತ್ರಿ ಕೆ.ಎಚ್. ರಂಗನಾಥ್ ಅವರಿಗೆ ಈ ವಿವರಣಾತ್ಮಕ ವರದಿಯನ್ನು ಅಧಿಕಾರಿಗಳು ಸದ್ಯದಲ್ಲಿಯೇ ಸಲ್ಲಿಸಲಿದ್ದಾರಂತೆ. ಸರ್ಕಾರದ ಕಡೆಯಿಂದ ಧನಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎನ್ನುವ ಸುದ್ದಿಯೂ ಹೊರಬಿದ್ದಿದೆ. ಕೃಷಿ, ಕಂದಾಯ ಹಾಗೂ ಪರಿಸರ ಇಲಾಖೆಗಳ ನಡುವೆ ರಕ್ಷಿತಾರಣ್ಯ ಕುರಿತಾದ ಮಾತುಕತೆಗಳು ಪ್ರಗತಿಯಲ್ಲಿವೆ.
ಈ ಮೊದಲು ಮುಕ್ತ ಬಾಲದ ಬಾವಲಿಗಳಿಗೆ ಪ್ರತ್ಯೇಕ ವನಧಾಮ ಸ್ಥಾಪಿಸಲು ಉದ್ದೇಶಿಸಲಾಗಿದ್ದರೂ, ಆ ಪ್ರಸ್ತಾವನೆಯನ್ನು ಸ್ಥಳೀಯರ ತೀವ್ರ ವಿರೋಧದಿಂದಾಗಿ ಕೈಬಿಡಲಾಗಿತ್ತು . ಪ್ರಸಕ್ತ ಉದ್ದೇಶಿತ ರಕ್ಷಿತಾರಣ್ಯ ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ ಹಾಗೂ ಗೋವಾಗಳಲ್ಲೂ ಹರಡಿಕೊಳ್ಳಲಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications