ಶಿಕ್ಷೆಯಾಗಿದೆ ಭಾರೀ ಹೆಚ್ಚು ! ವಿದ್ಯುತ್ ಕದ್ದೀರಿ ಜೋಕೆ ಜೋಕೆ!
ಬೆಂಗಳೂರು : ಕರ್ನಾಟಕ ವಿದ್ಯುತ್ ಕಾಯ್ದೆ (1910) ಗೆ ಬರುವ ವಿಧಾನಮಂಡಲ ಅಧಿವೇಶನದಲ್ಲಿ ತಿದ್ದುಪಡಿ ತರಲು ನಿರ್ಧರಿಸಿರುವ ರಾಜ್ಯ ಸರ್ಕಾರ, ವಿದ್ಯುತ್ ಕಳ್ಳರಿಗೆ ಗರಿಷ್ಠ 5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ತೀರ್ಮಾನಿಸಿದೆ.
ತಿದ್ದುಪಡಿ ಪ್ರಕಾರ ವಿದ್ಯುತ್ ಕಳ್ಳರಿಗೆ ಶಿಕ್ಷೆ ಮತ್ತು ದಂಡದ ಪ್ರಮಾಣಗಳನ್ನು ಗಮನಾರ್ಹವಾಗಿ ಹೆಚ್ಚಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಕಾಯ್ದೆಯ 39 ನೇ ಕಲಮನ್ನು ಕೈ ಬಿಟ್ಟು , 49 ನೇ ಕಲಮಿಗೆ ಉಪ ಕಲಮುಗಳನ್ನು ಸೇರಿಸಿ ಕರ್ನಾಟಕ ವಿದ್ಯುತ್ ತಿದ್ದುಪಡಿ ಕಾಯ್ದೆಯನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ವಾರ್ತಾ ಸಚಿವ ಬಿ.ಕೆ. ಚಂದ್ರಶೇಖರ್ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಪ್ರಸ್ತುತ ವಿದ್ಯುತ್ ಕಾಯ್ದೆಯಲ್ಲಿ ವಿದ್ಯುತ್ ಕಳ್ಳರಿಗೆ ಶಿಕ್ಷೆ ಅಥವಾ ದಂಡ ಎರಡರಲ್ಲಿ ಒಂದನ್ನಷ್ಟೇ ವಿಧಿಸಲು ಸಾಧ್ಯವಿದೆ. ಪ್ರಸ್ತುತ ಆರೋಪಿಗೆ 3 ತಿಂಗಳು ಮಾತ್ರ ಜೈಲು ಶಿಕ್ಷೆ ಅಥವಾ 1000 ರುಪಾಯಿ ದಂಡ ವಿಧಿಸಬಹುದಾಗಿದೆ. ಹೊಸ ತಿದ್ದುಪಡಿಯ ಪ್ರಕಾರ ಜೈಲು ಶಿಕ್ಷೆ 3 ರಿಂದ 5 ವರ್ಷಗಳವರೆಗೆ ಹಾಗೂ ದಂಡ 5 ರಿಂದ 50 ಸಾವಿರ ರುಪಾಯಿವರೆಗೆ ಹೆಚ್ಚಾಗಲಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications