ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗು ಡಿ.ಸಿ.ಸಿ. ಬ್ಯಾಂಕ್‌ಗೆ ಎರಡನೇ ಬಾರಿರಾಷ್ಟ್ರಪ್ರಶಸ್ತಿಯ ಗರಿ

By Staff
|
Google Oneindia Kannada News

ಮಡಿಕೇರಿ : ಕೊಡಗು ಜಿಲ್ಲಾ ಸಹಕಾರಿ ಬ್ಯಾಂಕ್‌ ಸತತ ಎರಡನೇ ಬಾರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಅತ್ಯುತ್ತಮ ಸೇವೆ ಹಾಗೂ ಅಭಿವೃದ್ಧಿಯನ್ನು ಪರಿಗಣಿಸಿ ಬ್ಯಾಂಕ್‌ಗೆ ಈ ಪ್ರಶಸ್ತಿ ನೀಡಲಾಗಿದೆ. ಜುಲೈ 12ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಈ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವ ಯಶವಂತ ಸಿನ್ಹ ಅವರಿಂದ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರು 1999-2000 ಸಾಲಿನ ಪ್ರಶಸ್ತಿ ಸ್ವೀಕರಿಸುವರು ಎಂದು ಬ್ಯಾಂಕ್‌ನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಎ. ರಮೇಶ್‌ ಮಾಧ್ಯಮ ಪ್ರತಿನಿಧಿಗಳಿಗೆ ಇಲ್ಲಿ ತಿಳಿಸಿದ್ದಾರೆ.

ಸರ್ವತೋಮುಖ ಅಭಿವೃದ್ಧಿಗಾಗಿ ಬ್ಯಾಂಕ್‌ 1997-98ರ ಸಾಲಿನ ಪ್ರಶಸ್ತಿ ಹಾಗೂ 5 ಲಕ್ಷ ರುಪಾಯಿ ನಗದು ಬಹುಮಾನವನ್ನು ಪಡೆದಿತ್ತು. ಈ ಬ್ಯಾಂಕ್‌ ಆರ್‌.ಬಿ.ಐ. ನಿಂದ ಲೈಸೆನ್ಸ್‌ ಪಡೆದ ಎರಡನೇ ಸಹಕಾರ ಬ್ಯಾಂಕ್‌ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X