ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಬರ, ಕೇಂದ್ರದ ನೆರವು ಪಡೆಯಲು ಯತ್ನ - ಕೃಷ್ಣ

By Staff
|
Google Oneindia Kannada News

ಬೆಂಗಳೂರು : ಕೈ ಕೊಟ್ಟಿರುವ ಮುಂಗಾರಿನಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಬಗ್ಗೆ ಸಮೀಕ್ಷೆ ನಡೆಯುತ್ತಿದ್ದು , ಈ ಅಧ್ಯಯನದ ಸಮಗ್ರ ವರದಿಯನ್ನು ಸಲ್ಲಿಸಿ ಕೇಂದ್ರದ ನೆರವು ಕೋರಲಾಗುವುದು ಎಂದು ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಹೇಳಿದ್ದಾರೆ.

ಜುಲೈ ತಿಂಗಳ 13 ರೊಳಗೆ ಸಮೀಕ್ಷಾ ವರದಿ ಬರಲಿದ್ದು , ತಕ್ಷಣವೇ ಕೇಂದ್ರದ ನೆರವು ಪಡೆಯಲು ಯತ್ನಿಸುವುದಾಗಿ ಸೋಮವಾರ ಖಾಸಗಿ ವಾಹಿನಿಯಾಂದಕ್ಕೆ ನೀಡಿದ ಸಂದರ್ಶನದಲ್ಲಿ ಕೃಷ್ಣ ಹೇಳಿದರು. ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ಬರದ ಪರಿಸ್ಥಿತಿ ತಲೆದೋರಿದ್ದು , ವಿಶೇಷವಾಗಿ ಉತ್ತರ ಕರ್ನಾಟಕದ ಗುಲ್ಬರ್ಗಾ, ರಾಯಚೂರು, ಬಳ್ಳಾರಿ, ಬಿಜಾಪುರ ಹಾಗೂ ಬೀದರ್‌ಗಳಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ ಎಂದು ಕೃಷ್ಣ ಹೇಳಿದರು.

ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೂ ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದಲ್ಲಿ ಮಳೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ . ಈ ಕಾರಣದಿಂದಾಗಿಯೇ ವಸ್ತು ಸ್ಥಿತಿ ತಿಳಿಸುವಂತೆ ಜನ ಪ್ರತಿನಿಧಿಗಳಿಗೆ ಸೂಚಿಸಲಾಗಿದೆ ಎಂದು ಕೃಷ್ಣ ಹೇಳಿದರು.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X