ಮುಂಗಾರು ವೈಫಲ್ಯದ ಪರಿಣಾಮ, ರಾಜ್ಯದಲ್ಲಿ ವಿದ್ಯುತ್ ಕ್ಷಾಮ
ಬೆಂಗಳೂರು : ರಾಜ್ಯದ ಜಲ ವಿದ್ಯುತ್ ಯೋಜನೆಗಳ ಪ್ರಮುಖ ಮೂಲಗಳಾದ ಲಿಂಗನಮಕ್ಕಿ ಹಾಗೂ ಸೂಪಾ ಜಲಾಶಯಗಳಲ್ಲಿ ದಿನದಿಂದ ದಿನಕ್ಕೆ ನೀರಿನ ಒಳಹರಿವು ಕಡಿಮೆಯಾಗುತ್ತಿದ್ದು , ರಾಜ್ಯ ಭೀಕರ ವಿದ್ಯುತ್ ಕ್ಷಾಮದ ದವಡೆಯಲ್ಲಿದೆ.
ಪ್ರಸ್ತುತ 9 ದಶಲಕ್ಷ ಯೂನಿಟ್ ವಿದ್ಯುತ್ ಕೊರತೆಯನ್ನು ರಾಜ್ಯ ಎದುರಿಸುತ್ತಿದ್ದು , ಮಳೆ ಬರದಿದ್ದಲ್ಲಿ ಮುಂದಿನ ದಿನಗಳಲ್ಲಿ ವಿದ್ಯುತ್ ಕೊರತೆ ಮತ್ತಷ್ಟು ಹೆಚ್ಚಾಗುವ ಇಂಗಿತವನ್ನು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಇಂಧನ ಖಾತೆ ಸಚಿವ ವೀರಕುಮಾರ್ ವ್ಯಕ್ತ ಪಡಿಸಿದರು.
ಪ್ರತಿದಿನ ರಾಜ್ಯದಲ್ಲಿ 50 ಸಾವಿರದ 883 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ ಹಾಗೂ 22 ಲಕ್ಷ ದ 537 ಯೂನಿಟ್ ವಿದ್ಯುತ್ತನ್ನು ನೆರೆ ರಾಜ್ಯಗಳಿಂದ ಪಡೆಯಲಾಗುತ್ತಿದೆ. ಆದರೂ ರಾಜ್ಯದಲ್ಲಿ 9 ದಶಲಕ್ಷ ಯೂನಿಟ್ ವಿದ್ಯುತ್ ಕೊರತೆಯಿದೆ. ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಿರುವುದೇ ಇದಕ್ಕೆ ಕಾರಣ ಎಂದು ವೀರಕುಮಾರ್ ಹೇಳಿದರು.
1819 ಅಡಿ ಗರಿಷ್ಠ ಮಟ್ಟವನ್ನು ಹೊಂದಿರುವ ಲಿಂಗನಮಕ್ಕಿ ಜಲಾಶಯದಲ್ಲಿ ಪ್ರಸ್ತುತ 1715 ಅಡಿ ಮಾತ್ರ ನೀರಿದೆ. ಅದೇ ರೀತಿ 564 ಮೀಟರ್ ಗರಿಷ್ಠ ಮಿತಿಯ ಸೂಪಾ ಅಣೆಕಟ್ಟೆಯಲ್ಲಿ 494 ಅಡಿ ನೀರಿದೆ. ಮಳೆಗಾಲದ ಬಿರುಸಿನ ಈ ದಿನಗಳಲ್ಲಿ ಜಲಾಶಯ ಸಾಮಾನ್ಯವಾಗಿ ತುಂಬಿರುತ್ತಿದ್ದುದು ವಾಡಿಕೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications