ಕುಂದಾಪುರ :ರಸ್ತೆ ಅಪಘಾತದಲ್ಲಿ ನೆಲಮಂಗಲದ11 ಮಂದಿ ಸಾವು
ಕುಂದಾಪುರ : ಮಂಗಳೂರಿನಿಂದ ಮುಂಬೈಕಡೆಗೆ ಹೊರಟಿದ್ದ ಖಾಸಗಿ ಬಸ್ಸೊಂದು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟಾಟಾ ಸುಮೋಗೆ ಡಿಕ್ಕಿ ಹೊಡೆದಾಗ ಸಂಭವಿಸಿದ ಭೀಕರ ದುರಂತದಲ್ಲಿ 11 ಮಂದಿ ಮೃತರಾಗಿದ್ದಾರೆ.
ಟಾಟಾ ಸುಮೋ ವಾಹನ ಭಟ್ಕಳದಿಂದ ನೆಲಮಂಗಲ ಕಡೆಗೆ ಸಾಗುತ್ತಿದ್ದು , ರಾಷ್ಟ್ರೀಯ ಹೆದ್ದಾರಿ 17ರ ತ್ರಾಸಿ ಬಳಿಯ ಐಸ್ ಪ್ಲಾಂಟ್ ಎದುರು ಈ ದುರಂತ ನಡೆಯಿತು. ಮೃತರಾದ 11 ಮಂದಿಯೂ ಟಾಟಾ ಸುಮೋದಲ್ಲಿ ಪ್ರಯಾಣಿಸುತ್ತಿದ್ದರು. ಅವರು ನೆಲಮಂಗಲದ ನಿವಾಸಿಗಳಾದ ಸಂಪತ್ ಕುಮಾರ್ (29), ಭಾಸ್ಕರ್ (23), ಬೀರಲಿಂಗಪ್ಪ (38), ಕುಮಾರ (23), ಬೈಲಪ್ಪ (22), ಅರುಣ್ ಕುಮಾರ್ (23), ತಮ್ಮಯ್ಯ (23), ಗೋವಿಂದರಾಜ (25), ಹಾಗೂ ಮಹೇಶ್ (28) ಎಂದು ಗುರುತಿಸಲಾಗಿದೆ.
ಟಾಟಾ ಸುಮೋ ವಾಹನವನ್ನು ನೆಲಮಂಗಲದ ಸುಶ್ಮಾ ಡಾಬಾ ಸೆಂಟರಿನ ಮಾಲಕರಿಂದ ಬಾಡಿಗೆಗೆ ಪಡೆದುಕೊಂಡು ಈ 11 ಮಂದಿ ಯುವಕರು ತೀರ್ಥ ಯಾತ್ರೆಗೆ ಹೊರಟಿದ್ದರು. ವಾಹನಗಳೆರಡು ಪರಸ್ಪರ ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋ , ಬಸ್ಸಿನಡಿ ಸಿಕ್ಕಿ ನಜ್ಜು ಗುಜ್ಜಾಗಿತ್ತು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications