ಎಂಜಿನಿಯರಿಂಗ್ : ಐ.ಟಿ., ಕಂಪ್ಯೂಟರ್ ಸೈನ್ಸ್‌ಗೆ ತಗ್ಗಿದ ಬೇಡಿಕೆ
ಬೆಂಗಳೂರು : ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಮೇಲೆ ಉಂಟಾಗಿರುವ ಆಘಾತದ ಹಿನ್ನೆಲೆಯಲ್ಲಿ ಎಂಜಿನಿಯರಿಂಗ್ ಪದವೀಧರರಾಗ ಬಯಸುವ ವಿದ್ಯಾರ್ಥಿಗಳು ಕೂಡ ತಮ್ಮ ಒಲವನ್ನು ಕಂಪ್ಯೂಟರ್, ಐ.ಟಿ. ಯಿಂದ ಎಲೆಕ್ಟ್ರಾನಿಕ್ಸ್ ಹಾಗೂ ಟೆಲಿಕಮ್ಯೂನಿಕೇಷನ್ಸ್‌ನತ್ತ ತಿರುಗಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಭಾರಿ ಬೇಡಿಕೆಯಲ್ಲಿದ್ದ ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ತಂತ್ರಜ್ಞಾನದ ಸೀಟುಗಳಿಗೆ ಈ ವರ್ಷ ಬೇಡಿಕೆ ಗಣನೀಯ ಪ್ರಮಾಣದಲ್ಲಿ ಕುಸಿದಿದೆ. ವೃತ್ತಿ ಶಿಕ್ಷಣ ಕೋರ್ಸ್‌ಗೆ ಈ ಬಾರಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕೋರ್ಸ್ ಆಯ್ಕೆಯಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಟೆಲಿಕಮ್ಯೂನಿಕೇಷನ್ಸ್ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.
ಸೋಮವಾರ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕ (ಸಿ.ಇ.ಟಿ)ದಲ್ಲಿ ಆರಂಭವಾದ ಎಂಜಿನಿಯರಿಂಗ್ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಈ ವಿಷಯ ಹೊರಬಿತ್ತು. ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ ಸೀಟುಗಳಿಗೆ ಬದಲಾಗಿ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ಸ್ ಹಾಗೂ ಟೆಲಿಕಮ್ಯೂನಿಕೇಷನ್ಸ್‌ಗೆ ಮೊದಲ ಆದ್ಯತೆ ನೀಡಿದ್ದಾರೆ. ನಂತರದ ಸ್ಥಾನ ಮೆಕ್ಯಾನಿಕಲ್ ಎಂಜಿನಿಯರಿಂಗ್‌ದು.
ಸಿ.ಇ.ಟಿ. ಸುದ್ದಿ : ಈ ಮಧ್ಯೆ ಸಿಇಟಿ ಘಟಕ ಮಂಗಳವಾರ ನಡೆಸಿದ ಎಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ 629 ಕರ್ನಾಟಕೇತರ ವಿದ್ಯಾರ್ಥಿಗಳಿಗೆ ಸಂದರ್ಶನ ನಡೆಸಿ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಸೀಟುಗಳನ್ನು ಹಂಚಲಾಗಿದೆ. ಒಟ್ಟು 3572 ಸೀಟುಗಳನ್ನು ಕರ್ನಾಟಕೇತರ ವಿದ್ಯಾರ್ಥಿಗಳಿಗೆ ಮೀಸಲಾಗಿಡಲಾಗಿದೆ. ಈ ಪೈಕಿ 2943 ಸೀಟುಗಳು ಉಳಿದಿವೆ.
ಸೋಮವಾರ ನಡೆದ ಸಂದರ್ಶನದಲ್ಲಿ ಒಂದರಿಂದ 1200ನೇ ರ್ಯಾಂಕ್‌ವರೆಗಿನ ವಿದ್ಯಾರ್ಥಿಗಳಿಗೆ ಸಂದರ್ಶನ ನಡೆಸಲಾಯಿತು ಎಂದು ಸಿ.ಇ.ಟಿ. ಘಟಕದ ಪ್ರಕಟಣೆ ತಿಳಿಸಿದೆ.
(ಇನ್‌ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications