ಸತ್ಯಂ ಕಂಪ್ಯೂಟರ್ಸ್ಗೆ ಮೊದಲ ತ್ರೆೃಮಾಸಿಕದಲ್ಲಿ ಶೇ.141.15 ಲಾಭ
ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್ ಪ್ರಸಕ್ತ ವಿತ್ತ ವರ್ಷದ ಮೊದಲ ತ್ರೆೃಮಾಸಿಕದಲ್ಲಿ ಲಾಭ ಹೆಚ್ಚಳದ ಪಟಾಕಿ ಸಿಡಿಸಿದರೆ, ಅದರ ಸ್ಪರ್ಧಿ ಸತ್ಯಂ ಕಂಪ್ಯೂಟರ್ ಸರ್ವಿಸಸ್ ಲಾಭದ ಬಾಂಬನ್ನೇ ಹಾಕಿದೆ ! ಪ್ರಥಮ ತ್ರೆೃಮಾಸಿಕದಲ್ಲಿ ಕಂಪನಿ ಮಾಡಿರುವ ನಿವ್ವಳ ಲಾಭ ಪ್ರತಿಶತ 141.15.
ಕಂಪನಿ 2001- 2002ನೇ ವಿತ್ತ ವರ್ಷದ ಪ್ರಥಮ ತ್ರೆೃಮಾಸಿಕದಲ್ಲಿ (ಜೂನ್ 30ಕ್ಕೆ ಮುಗಿದಿರುವ ಮೊದಲ 3 ತಿಂಗಳಲ್ಲಿ) 121 ಕೋಟಿ ರುಪಾಯಿ ನಿವ್ವಳ ಲಾಭ ಮಾಡಿದೆ. ಈ ಅವಧಿಯಲ್ಲಿ 421 ಕೋಟಿ ರುಪಾಯಿ ವಹಿವಾಟು ನಡೆಸಿದೆ. ಕಳೆದ ವಿತ್ತ ವರ್ಷದ ಮೊದಲ ತ್ರೆೃಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭ 50.3 ಕೋಟಿ ಹಾಗೂ ವಹಿವಾಟು 240 ಕೋಟಿ ರುಪಾಯಿಯಾಗಿತ್ತು. ಅಂದರೆ, ವಹಿವಾಟಿನಲ್ಲಿ 74 ಪ್ರತಿಶತ ಏರಿಕೆಯಾಗಿದೆ.
ಪ್ರಸ್ತುತ ಸಾಫ್ಟ್ವೇರ್ ರಫ್ತಿನಲ್ಲಿ ಭಾರತದಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಸತ್ಯಂ, ಇನ್ಫೋಸಿಸ್ ಅಲೆಯೆಬ್ಬಿಸುವ ಮುನ್ನ ನಂಬರ್ ಒನ್ ಕಂಪನಿಯಾಗಿತ್ತು. ಅಮೆರಿಕೆಯ ಆರ್ಥಿಕ ಹಿನ್ನಡೆಯಿಂದ ಭಾರತದ ಸಾಫ್ಟ್ವೇರ್ ಕಂಪನಿಗಳಿಗೆ ಯಾವುದೇ ಏಟು ಬಿದ್ದಿಲ್ಲ ಎಂಬುದನ್ನು ಸತ್ಯಂ ರುಜುವಾತು ಮಾಡಿದೆ. ಮುಂದೆಯೂ ತನ್ನ ಲಾಭದ ಓಟ ಹೆಚ್ಚಿಸಿಕೊಳ್ಳುವ ವಿಶ್ವಾಸ ಕಂಪನಿಯದ್ದು.
ಮಂಗಳವಾರ ಇನ್ಫೋಸಿಸ್ನ ಮೊದಲ ತ್ರೆೃಮಾಸಿಕ ವಿತ್ತ ಪ್ರಕಟಣೆ ಹೊರಬೀಳುತ್ತಿದ್ದಂತೆ ಮಾರುಕಟ್ಟೆ ಸೂಚ್ಯಂಕದಲ್ಲಿ ಗಣನೀಯ ಏರಿಕೆ ಕಂಡು ಬಂದಿತ್ತು. ಬುಧವಾರ ಕೂಡ ಇದು ಮುಂದುವರೆಯುವ ನಿರೀಕ್ಷೆಯಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಕರ್ನಾಟಕ ಸಿಲಿಕಾನ್ ಕಣಿವೆ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications