ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯಕ್ಕೆ ಸ್ವಂತ ಕಮ್ಯಾಂಡೊ ಪಡೆ
ಬೆಂಗಳೂರು : ತುರ್ತು ಹಾಗೂ ಸೂಕ್ಷ್ಮ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಮಾದರಿಯಲ್ಲಿ ತನ್ನದೇ ಆದ ಕಮ್ಯಾಂಡೊ ಪಡೆಯನ್ನು ಹೊಂದಲು ರಾಜ್ಯ ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ.
ಪ್ರಸ್ತುತ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಉಂಟಾದ ಸಂದರ್ಭಗಳಲ್ಲಿ ನೆರೆಯ ರಾಜ್ಯಗಳಿಂದ ಕಮ್ಯಾಂಡೊ ಹಾಗೂ ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಿಬ್ಬಂದಿಗಳನ್ನು ಎರವಲು ಪಡೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತನ್ನದೇ ಆದ ಕಮ್ಯಾಂಡೊ ಪಡೆಯನ್ನು ರೂಪಿಸುವ ಪ್ರಸ್ತಾವನೆಯನ್ನು ಗೃಹ ಇಲಾಖೆಗೆ ಸಲ್ಲಿಸಲು ಸಿದ್ಧಪಡಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯಾಬ್ಬರು ತಿಳಿಸಿದ್ದಾರೆ.
ಸೂಕ್ಷ್ಮ ಪರಿಸ್ಥಿತಿ ಉಂಟಾದಾಗ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ತಿಳಿಗೊಳಿಸಲು ಈ ಕಮ್ಯಾಂಡೊ ಪಡೆ ಕಾಲ ವಿಳಂಬವಿಲ್ಲದೆ ತಕ್ಷಣವೇ ಕಾರ್ಯೋನ್ಮುಖವಾಗುತ್ತದೆ. ಕಳೆದ ವರ್ಷ ಉಂಟಾಗಿದ್ದ ರಾಜ್ ಕುಮಾರ್ ಅಪಹರಣದಂತ ಸನ್ನಿವೇಶಗಳಲ್ಲಿ ಈ ಪಡೆ ಅತ್ಯಂತ ಪರಿಣಾಮಕಾರಿ ಎಂದು ಪೊಲೀಸ್ ಮೂಲಗಳು ಅಭಿಪ್ರಾಯಪಡುತ್ತವೆ.
ಇತರ ರಾಜ್ಯಗಳಲ್ಲಿ ಇರುವ ಕಮ್ಯಾಂಡೊ ಪಡೆಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಅಧ್ಯಯನ ಪ್ರಾರಂಭವಾಗಿದೆ. ಅಧ್ಯಯನದ ನಂತರ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.
(ಇನ್ಫೋ ವಾರ್ತೆ)
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications