‘ಹಾಹಾಕಾರ ಎದ್ದಿರುವಾಗ ಸರ್ಕಾರಕ್ಕೆ ಸರ್ಟಿಫಿಕೇಟ್’-ಹೆಗಡೆ ಲೇವಡಿ
ಗುಲ್ಬರ್ಗಾ : ಬರದಿಂದ ರಾಜ್ಯ ತತ್ತರಿಸುತ್ತಿದ್ದು , ಎಲ್ಲೆಡೆ ಹಾಹಾಕಾರ ಎದ್ದಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸರ್ಕಾರ ಉತ್ತಮ ಸಾಧನೆ ಮಾಡಿದೆ ಎಂದು ಕಾಂಗೈ ಹೈಕಮಾಂಡ್ನ ಪರಾಮರ್ಶನ ಸಮಿತಿ ನೀಡಿರುವ ಸರ್ಟಿಫಿಕೇಟನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಯುಕ್ತ ಜನತಾದಳದ ಮುಖಂಡ ರಾಮಕೃಷ್ಣ ಹೆಗಡೆ ಟೀಕಿಸಿದ್ದಾರೆ.
ನಾಲ್ಕೈದು ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಇತರ ಜಿಲ್ಲೆಗಳಲ್ಲಿ ಮಳೆ ಬೀಳದೆ ಜನತೆ ಕಂಗಾಲಿಗೆ ಬಿದ್ದಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಹೆಗಡೆ ಹೇಳಿದರು. ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಬಿತ್ತಿದ ಬೀಜ ಸುಟ್ಟು ಹೋಗುತ್ತಿದೆ. ಅನೇಕ ಕಡೆಗಳಲ್ಲಿ ಬಿತ್ತನೆಯೇ ಆಗಿಲ್ಲ . ಇಂತಹ ಸಂದರ್ಭದಲ್ಲಿ ಪರಾಮರ್ಶನ ಸಮಿತಿ ಸರ್ಕಾರಕ್ಕೆ ‘ಸರ್ಟಿಫಿಕೇಟ್’ ನೀಡುತ್ತದೆ ಎಂದು ಅವರು ವ್ಯಂಗ್ಯವಾಡಿದರು.
ಪರಾಮರ್ಶನ ಸಮಿತಿಯ ಔಚಿತ್ಯದ ಕುರಿತು ಕಟುವಾಗಿ ಮಾತನಾಡಿದ ಹೆಗಡೆ, ರಾಜ್ಯದಲ್ಲಿ ಬರದ ಪರಿಸ್ಥಿತಿ ಮೂಡಿರುವಾಗ ಪರಾಮರ್ಶನ ಸಮಿತಿ ಸರ್ಟಿಫಿಕೇಟ್ ನೀಡಲಿಕ್ಕೆ ಕೃಷ್ಣ ಅವರು ಮಾಡಿರುವುದಾದರೂ ಏನು ? ಅವರು ಏನೇನು ಪರಿಹಾರ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ ಎಂದು ಪ್ರಶ್ನಿಸಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಕೃಷ್ಣ ಗಾರುಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications