ವಿಗ್ರಹಚೋರರ ಸೆರೆ, 5 ಕೋಟಿ ರು. ಬೆಲೆಯ ವಿಗ್ರಹಗಳ ವಶ
ಬೆಂಗಳೂರು : ನಗರದ ಪೊಲೀಸರು ಮತ್ತೊಮ್ಮೆ ತಮ್ಮ ಶೌರ್ಯ- ಸಾಮರ್ಥ್ಯವನ್ನು ಸಂದೇಹಕ್ಕೆಡೆಯಿಲ್ಲದಂತೆ ನಿರೂಪಿಸಿದ್ದಾರೆ. ಅವರ ಸಾಮರ್ಥ್ಯಕ್ಕೆ ನಮಸ್ಕಾರ! ವಿಷಯ ಇಷ್ಟು -
ನಾಲ್ವರು ಕುಖ್ಯಾತ ವಿಗ್ರಹ ಚೋರರನ್ನು ಬಂಧಿಸಿರುವ ನಗರ ಅಪರಾಧ ದಳದ ಪೊಲೀಸರು, ಆರೋಪಿಗಳಿಂದ ಸುಮಾರು 5 ಕೋಟಿ ರುಪಾಯಿಗೂ ಹೆಚ್ಚು ಮೌಲ್ಯದ 5 ಪಂಚಲೋಹ ವಿಗ್ರಹಗಳನ್ನು ವಶಪಡಿಸಿಕೊಂಡಿದ್ದಾರೆ.
ಜೆ.ಪಿ. ನಗರ 8 ನೇ ಘಟ್ಟದ ನಿವಾಸಿಗಳಾದ ನರಸಿಂಹರಾಜ (33) ಹಾಗೂ ಡಿ. ಮೂರ್ತಿ (28) ಮತ್ತು ಗೌರಿಬಿದನೂರಿನವರಾದ ಜೆ.ಎನ್. ಶಂಕರರಾವ್ (38) ಹಾಗೂ ಸಿ. ಕೃಷ್ಣಪ್ಪ (38) ಅವರು ಪೊಲೀಸರಿಗೆ ಸಿಕ್ಕಿಬಿದ್ದಿರುವ ವಿಗ್ರಹ ಚೋರರು. ಈ ವಿಷಯವನ್ನು ನಗರ ಪೊಲೀಸ್ ಕಮೀಷನರ್ ಟಿ. ಮಡಿಯಾಳ್ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ವಿಗ್ರಹಗಳು 1 ಸಾವಿರದ 400 ವರ್ಷಗಳಿಗಿಂತಲೂ ಹೆಚ್ಚು ಪ್ರಾಚೀನತೆ ಹೊಂದಿವೆ ಎಂದು ನಂಬಲಾಗಿದೆ. ಚಂದ್ರ ಮೌಳೇಶ್ವರ, ಲಕ್ಷ್ಮಿ, ಸತ್ಯ ನಾರಾಯಣ ಸ್ವಾಮಿ ಹಾಗೂ ಪಂಚಮುಖಿ ಗಣಪತಿಗಳ ಪಂಚಲೋಹದ ವಿಗ್ರಹಗಳನ್ನು ಆರೋಪಿಗಳಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜುಲೈ 3 ರಂದು ನರಸಿಂಹಮೂರ್ತಿ ಹಾಗೂ ಶಂಕರ ರಾವ್ ಅವರನ್ನು ಕಾಟನ್ ಪೇಟೆಯಲ್ಲಿ ಬಂಧಿಸಿ, ಅವರಿಂದ ದೊರೆತ ಸುಳಿವಿನ ಮೂಲಕ ಉಳಿದಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications