ಅಮೇರಿಕಾ ಆರ್ಥಿಕ ಕುಸಿತದ ಲಾಭ ಪಡೆಯಲು ಎಸ್.ಎಂ. ಕೃಷ್ಣ ಕರೆ
ಬೆಂಗಳೂರು : ಅಮೇರಿಕಾ ಆರ್ಥಿಕ ಕುಸಿತವನ್ನು ರಾಜ್ಯದ ಮಾಹಿತಿ ತಂತ್ರಜ್ಞಾನದ ಕಂಪನಿಗಳು ಲಾಭವನ್ನಾಗಿ ಪರಿವರ್ತಿಸಿಕೊಳ್ಳಲು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕರೆ ಕೊಟ್ಟಿದ್ದಾರೆ.
ಬೆಂಗಳೂರು- ಮೈಸೂರು ರಸ್ತೆಯ ಗ್ಲೋಬಲ್ ವಿಲೇಜ್‌ನಲ್ಲಿ ಗುರುವಾರ ಕ್ಷೇಮ ಟೆಕ್ನಾಲಜಿ ಪಾರ್ಕ್ ಉದ್ಘಾಟಿಸಿ ಮಾತನಾಡುತ್ತಿದ್ದ ಕೃಷ್ಣ , ರಾಜ್ಯದ ಐಟಿ ಕಂಪನಿಗಳು ಹೊಸ ಸವಾಲನ್ನು ಅರಗಿಸಿಕೊಂಡು ಮುನ್ನಡೆಯಬೇಕಾಗಿದೆ ಎಂದರು. ಅಮೇರಿಕಾದ ಆರ್ಥಿಕ ಕುಸಿತದ ಲಾಭವನ್ನು ನಾವು ಬಳಸಿಕೊಳ್ಳಲೇಬೇಕು. ಐಟಿ ಕ್ಷೇತ್ರದಲ್ಲಿ ರಾಜ್ಯದ ಕಂಪನಿಗಳು ವಿಶ್ವ ಮಟ್ಟದಲ್ಲಿ ಸ್ಥಾನ ಪಡೆಯಬೇಕು ಎಂದು ಅವರು ಹೇಳಿದರು.
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ಅತೀವ ಪ್ರಗತಿ ಸಾಧಿಸಿದ್ದು , ದೇಶದೊಳಗೆ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಐಟಿ ಕ್ಷೇತ್ರದಲ್ಲಿ ಹೆಚ್ಚುಗಾರಿಕೆ ಹೊಂದಿರುವುದಾಗಿ ಕೃಷ್ಣ ಸಂತೋಷಿಸಿದರು. ಇತ್ತೀಚಿನ ಸಮೀಕ್ಷೆಯಾಂದು ನ್ಯೂಯಾರ್ಕ್‌ಗಿಂತ ಬೆಂಗಳೂರು ಐಟಿ ಕ್ಷೇತ್ರದಲ್ಲಿ ಮುಂದಿದೆ ಎಂದು ತಿಳಿಸಿರುವುದನ್ನು ಹಾಗೂ ಐಟಿ ಕ್ಷೇತ್ರದಲ್ಲಿ ಬೆಂಗಳೂರಿನ ಬೆಳವಣಿಗೆಯನ್ನು ವಿಶ್ವಸಂಸ್ಥೆ ಗುರ್ತಿಸಿರುವುದನ್ನು ಮುಖ್ಯಮಂತ್ರಿ ನೆನಪಿಸಿಕೊಂಡರು. ಈ ಹೆಗ್ಗಳಿಕೆಯನ್ನು ನಾವು ಉಳಿಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.ರೈತರ ಹಕ್ಕುಪತ್ರಗಳ ಕಂಪ್ಯೂಟರೀಕರಣ
ಮಾರ್ಚ್ 2002 ರೊಳಗೆ ರಾಜ್ಯದ ಎಲ್ಲ 175 ತಾಲ್ಲೂಕುಗಳ ರೈತರ ಜಮೀನಿಗೆ ಸಂಬಂಧಿಸಿದ ಹಕ್ಕುಪತ್ರಗಳನ್ನು ಕಂಪ್ಯೂಟರೀಕರಣಗೊಳಿಸಲಾಗುವುದು ಎಂದು ಕೃಷ್ಣ ಪ್ರಕಟಿಸಿದರು.
ನಾಡ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಅರ್ಜಿ ಸಲ್ಲಿಸಿ ನಮ್ಮ ರೈತಾಪಿ ಜನರ ಕೈಗಳು ಬಿದ್ದು ಹೋಗಿವೆ ಎಂದು ತೀವ್ರ ವಿಷಾದದಿಂದ ಹೇಳಿದ ಅವರು, ಇನ್ನು ಮುಂದೆ ಅರ್ಜಿ ಸಲ್ಲಿಸಿ ಕಾಯುವ ಗೋಳು ರೈತರಿಗೆ ಇರುವುದಿಲ್ಲ ಎಂದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications