ನಿರೀಕ್ಷಿಸಿ ! ಕರ್ನಾಟಕಕ್ಕೆ ಬರುತ್ತಿದೆ‘ಪ್ಯಾಲೇಸ್ ಆನ್ ವ್ಹೀಲ್ಸ್’
ಬೆಂಗಳೂರು : ರಾಜ್ಯ ಪ್ರವಾಸೋದ್ಯಮದ ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಲು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಸದ್ಯದಲ್ಲೇ ವಸತಿ ಮತ್ತು ನಗರಾಭಿವೃದ್ಧಿ ನಿಗಮ (ಹುಡ್ಕೋ) ಕ್ಕೆ 100 ಕೋಟಿ ರುಪಾಯಿ ಸಾಲದ ಕೋರಿಕೆಯ ಪ್ರಸ್ತಾವನೆ ಸಲ್ಲಿಸಲಿದೆ.
ಭಾರೀ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ‘ಎಕ್ಸ್‌ಪ್ಲೋಸಿಟಿ’ಗೆ ಶುಕ್ರವಾರ ಈ ವಿಷಯ ತಿಳಿಸಿದ್ದಾರೆ. ಪ್ರತಿ ಜಿಲ್ಲೆಯ ಮೂಲಭೂತ ಸೌಕರ್ಯದ ಸ್ವರೂಪ ಕುರಿತಂತೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳನ್ನು ಕೋರಲಾಗಿದೆ. ಅವುಗಳ ಅಗತ್ಯದ ಆಧಾರದ ಮೇಲೆ ಸಾಲ ಯಾಚಿಸಲಾಗುವುದು. ಮೊದಲು ಮೂಲಭೂತ ಸೌಕರ್ಯಕ್ಕೇ ನಮ್ಮ ಒತ್ತು. ನಂತರ ಪ್ರಾಚೀನ ಶಿಲ್ಪ ಕಲೆ ಮೊದಲಾದ ಸಂಪತ್ತನ್ನು ರಕ್ಷಿಸುವುದಕ್ಕೆ ಆದ್ಯತೆ ಎಂದರು.
ಪ್ಯಾಲೇಸ್ ಆನ್ ವ್ಹೀಲ್ಸ್ ಎಂಬ ಹಳೆಯ ರಾಜ ಮಹಾರಾಜರ ವೈಭವ ಬಿಂಬಿಸುವ ರೈಲು ಗಾಡಿಯಾಂದನ್ನು ಪ್ರವಾಸೋದ್ಯಮ ಇಲಾಖೆ ಸದ್ಯದಲ್ಲೇ ಪ್ರದರ್ಶನಕ್ಕೆ ತರಲಿದೆ. ಮೈಸೂರು, ಹಂಪಿ, ಬೇಲೂರು ಹಾಗೂ ಹಳೇಬೀಡು ಮಾರ್ಗದಲ್ಲಿ ಈ ರೈಲು ಸಂಚರಿಸಲಿದೆ ಎಂದು ಪ್ರವಾಸೋದ್ಯಮ ಸಚಿವ ರೋಷನ್ ಬೇಗ್ ತಿಳಿಸಿದರು.
ಪ್ರವಾಸೋದ್ಯಮ ಅವಕಾಶಗಳನ್ನು ಕ್ರೋಢೀಕರಿಸುವ ಹಾದಿಯಲ್ಲಿ ರಾಜ್ಯ ಪ್ರವಾಸೋದ್ಯಮ ಮತ್ತು ಅಭಿವೃದ್ಧಿ ನಿಗಮ, ರಾಜ್ಯದ ಸಂಪತ್ತಿನ ಖಾಸಗೀಕರಣದ ಸಾಧ್ಯತೆ ಕುರಿತು ಅಧ್ಯಯನ ಕೂಡ ನಡೆಸಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications