ಕಾರು ಅಪಘಾತ: ಚಿತ್ರನಟಿ ಜಯಂತಿ ಪ್ರಾಣಾಪಾಯದಿಂದ ಪಾರು
ಬಳ್ಳಾರಿ :ಹೆಸರಾಂತ ಚಿತ್ರನಟಿ, ಪಂಚಭಾಷಾ ತಾರೆ ಜಯಂತಿ ಅವರು ಪ್ರಯಾಣಿಸುತ್ತಿದ್ದ ಕಾರು ಇಲ್ಲಿಗೆ 45 ಕಿಲೋ ಮೀಟರ್ ದೂರದ ಆಲೂರು ಬಳಿ ಅಪಘಾತಕ್ಕೀಡಾಗಿ ಹತ್ತು ಅಡಿ ಹಳ್ಳಕ್ಕೆ ಉರುಳಿತಾದರೂ, ಜಯಂತಿ ಹಾಗೂ ಇತರ ಮೂವರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಿ.ಸಿ. ಪಾಟೀಲ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಶಿವಪ್ಪ ನಾಯಕ ಚಿತ್ರದ ಚಿತ್ರೀಕರಣ ಮುಗಿಸಿಕೊಂಡು, ಗುರುರಾಯರ ದರ್ಶನಕ್ಕಾಗಿ ಜಯಂತಿ ಅವರು, ಮಂತ್ರಾಲಯಕ್ಕೆ ಹೊರಟಿದ್ದಾಗ ಅಪಘಾತ ಸಂಭವಿಸಿತು. ಆಂಧ್ರಪ್ರದೇಶದ ಅಲೂರು ಸಮೀಪ ಜಯಂತಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯಾಂದು ಡಿಕ್ಕಿ ಹೊಡೆದಿದ್ದರಿಂದ, ಕಾರು 10 ಅಡಿ ಹಳ್ಳಕ್ಕೆ ಉರುಳಿತು.
ಜಯಂತಿ ಹಾಗೂ ಕಾರಿನಲ್ಲಿದ್ದ ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಿದ ವೈದ್ಯರು ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ. ಜಯಂತಿ ಅವರ ಪುತ್ರ ಕೃಷ್ಣಕುಮಾರ್ ತಮ್ಮ ಭಾವಿ ಪತ್ನಿ ಹಾಗೂ ಚಿತ್ರನಟಿ ಅನು ಪ್ರಭಾಕರ್ ಅವರೊಂದಿಗೆ ತೆರಳಿ ಅಮ್ಮನ ಯೋಗಕ್ಷೇಮ ವಿಚಾರಿಸಿಕೊಳ್ಳುತ್ತಿದ್ದಾರೆ.(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications