ಸಿದ್ಧವಾಗುತ್ತಿದೆ 9 ಅಂಶಗಳ ಆಗ್ರಾ ಘೋಷಣೆ?
ಆಗ್ರಾ : ಆಗ್ರಾ ಘೋಷಣೆ ಪ್ರಕಟಣೆ ಹೆಚ್ಚೂ ಕಮ್ಮಿ ಖಚಿತವಾಗಿದ್ದು, ಅದಕ್ಕೆ ಅಂತಿಮ ಟಚ್ ನೀಡಲಾಗುತ್ತಿದೆ ಎಂದು ಪಾಕಿಸ್ತಾನಿ ಸರ್ಕಾರದ ವಾರ್ತಾ ಅಧಿಕಾರಿ ತಿಳಿಸಿದ್ದಾರೆ.
ಭಾರತ ಹಾಗೂ ಪಾಕಿಸ್ತಾನದ ಉಭಯ ನಿಯೋಗಗಳು 9 ಅಂಶಗಳಿರುವ ಘೋಷಣೆಯನ್ನು ಸಿದ್ಧಪಡಿಸುತ್ತಿದ್ದು, ಸೋಮವಾರ ಸಂಜೆ 5 ಗಂಟೆಯ ಆಸುಪಾಸಿನಲ್ಲಿ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.
ಪಾಕಿಸ್ತಾನದ ವಾರ್ತಾ ಅಧಿಕಾರಿ ಎ.ಎ.ಗೊಂಡಾಲ್, ಈವರೆಗಿನ ಬೆಳವಣಿಗೆಗಳ ಬಗ್ಗೆ ನಮಗೆ ತೃಪ್ತಿ ಇದೆ. ಆದರೆ ಭಾರತದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಕಾಶ್ಮೀರ ಸಮಸ್ಯೆಯನ್ನು ತಮ್ಮ ಸುದ್ದಿಗೋಷ್ಠಿಯಲ್ಲಿ ಉಲ್ಲೇಖಿಸದಿರುವುದಕ್ಕೆ ಅಸಮಾಧಾನ ಇದೆ ಎಂದು ಹೇಳಿದರು.
ಶೃಂಗಸಭೆಗೆ ಸತ್ಫಲ ದೊರೆತಲ್ಲಿ ಉಭಯ ರಾಷ್ಟ್ರಗಳ ಜೊತೆ ಸಂಬಂಧ ಉತ್ತಮವಾಗುತ್ತದೆ. ಅಕಸ್ಮಾತ್ ಅದರ ಉಪಸಂಹಾರದಲ್ಲಿ ಅಪಸ್ವರ ಕೇಳಿದಲ್ಲಿ, ಅದಕ್ಕೆ ಒಂದು ವಿಧದಲ್ಲಿ ಸುಷ್ಮಾ ಸ್ವರಾಜ್ ಅವರನ್ನು ಹೊಣೆಯಾಗಿಸುವ ಸುದ್ದಿ ಕೂಡ ಕೇಳಿ ಬರುತ್ತಿದೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications