For Daily Alerts
ರಾಜ್ಯದಲ್ಲಿನ ಅನಧಿಕೃತ ದೇಗುಲಗಳ ವಿರುದ್ಧ ಮುಖ್ಯಮಂತ್ರಿಯುದ್ಧ
ಬೆಂಗಳೂರು : ರಾಜ್ಯದಲ್ಲಿನ ಎಲ್ಲ ಅನಧಿಕೃತ ದೇವಸ್ಥಾನಗಳನ್ನು ಕೆಡವಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಾನ ಪರಿಷತ್ತಿನಲ್ಲಿ ಗುರುವಾರ ಪ್ರಕಟಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿ.ಎಲ್. ಶಂಕರ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಮುಖ್ಯಮಂತ್ರಿಗಳು, ಅನಧಿಕೃತ ದೇಗುಲಗಳನ್ನು ಕೆಡಹುವ ಬಗೆಗೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಕಳಿಸಲಾಗುವುದು ಎಂದು ತಿಳಿಸಿದರು. ಅನಧಿಕೃತ ದೇಗುಲಗಳನ್ನು ಯಾವುದೇ ದಾಕ್ಷಿಣ್ಯಕ್ಕೆ ಒಳಗಾಗದೆ ನಾಶಗೊಳಿಸಲಾಗುವುದು ಎಂದು ಅವರು ಹೇಳಿದರು.
ಬೆಂಗಳೂರು ನಗರದ ರಸ್ತೆಗಳಲ್ಲಿ ನಾಯಿಕೊಡೆಗಳಂತೆ ನಿರ್ಮಾಣವಾಗಿರುವ ದೇಗುಲಗಳನ್ನು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಬೆಂಗಳೂರು ಮಹಾನಗರ ಪಾಲಿಕೆ ಈಗಾಗಲೇ ನೆಲಸಮಗೊಳಿಸುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)