ಒರಿಸ್ಸಾ ಪ್ರವಾಹ : ಸಾವಿರಾರು ಹಳ್ಳಿ ಜಲಾವೃತ, 32 ಸಾವು
ಭುವನೇಶ್ವರ : ಕಳೆದ 72 ಗಂಟೆಗಳಲ್ಲಿ ಮಹಾನದಿ ಸೇರಿದಂತೆ ಒರಿಸ್ಸಾದ ಪ್ರಮುಖ ನದಿಗಳಲ್ಲಿ ಉಂಟಾಗಿರುವ ಮಿತಿ ಮೀರಿದ ಪ್ರವಾಹದಿಂದಾಗಿ ಕನಿಷ್ಠ 32 ಮಂದಿ ಸಾವಿಗೀಡಾಗಿದ್ದಾರೆ. ಸಾವಿರಾರು ಹಳ್ಳಿಗಳು ಜಲಾವೃತವಾಗಿದ್ದು, ಅಂದಾಜು 5 ದಶಲಕ್ಷ ಮಂದಿ ಪ್ರವಾಹ ಪೀಡಿತರ ಪಟ್ಟಿಯಲ್ಲಿದ್ದಾರೆ.
ಪ್ರವಾಹ ಪರಿಹಾರ ಕಾರ್ಯಗಳು ವ್ಯಾಪಕವಾಗಿ ನಡೆಯುತ್ತಿದ್ದು , ಪರಿಹಾರ ಕಾರ್ಯಗಳಲ್ಲಿ ನೆರವು ನೀಡಲು ಒರಿಸ್ಸಾಕ್ಕೆ ಸೇನೆ ಧಾವಿಸಿದೆ. ಭಾರತೀಯ ವಾಯುಪಡೆಯ ಹೆಲಿಕ್ಯಾಪ್ಟರ್‌ಗಳು ಆಹಾರದ ಪೊಟ್ಟಣಗಳನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ಒದಗಿಸುತ್ತಿವೆ ಎಂದು ನವದೆಹಲಿಯ ವಕ್ತಾರರೊಬ್ಬರು ತಿಳಿಸಿದ್ದಾರೆ.
ಪಶ್ಚಿಮ ಒರಿಸ್ಸಾ ಹಾಗೂ ಕರಾವಳಿ ಪ್ರದೇಶಗಳಲ್ಲಿ ಪ್ರವಾಹದ ಹಾವಳಿ ಹೆಚ್ಚಿನ ಪ್ರಮಾಣದಲ್ಲಿದ್ದು , ರಸ್ತೆ ಗಳ ತುಂಬ ನೀರು ಹರಿಯುತ್ತಿದ್ದರೆ ಸಂಪರ್ಕ ವ್ಯವಸ್ಥೆ ಭಾಗಶಃ ಪೂರ್ಣವಾಗಿ ಹಾಳಾಗಿದೆ. ಮಹಾನದಿಯಲ್ಲಿನ ನೀರು ಅಪಾಯದ ಮಟ್ಟ ಮೀರಿರುವುದರಿಂದ ಹಿರಾಕುಡ್ ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ.
630 ಅಡಿ ಗರಿಷ್ಠ ಮಟ್ಟವನ್ನು ಹೊಂದಿರುವ ಅಣೆಕಟ್ಟೆಯಲ್ಲಿ ಈಗಾಗಲೇ 628 ಅಡಿ ನೀರಿದೆ. ಆ ಭಾಗಗಳ ಜನತೆ ಸೈಕ್ಲೋನ್ ಷೆಲ್ಟರ್‌ಗಳಲ್ಲಿ ಆಶ್ರಯ ಪಡೆದಿದ್ದಾರೆ. ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಬಹಳ ಸೂಕ್ಷ್ಮ ಹಾಗೂ ಕಠಿಣಕರವಾಗಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಡಿ.ಪಿ. ಬಗ್‌ಚಿ ತಿಳಿಸಿದ್ದಾರೆ.
ಪ್ರಧಾನಿಗಳಿಂದ 100 ಕೋಟಿ ರುಪಾಯಿ ಬಿಡುಗಡೆ
ಪ್ರವಾಹದ ಸುಳಿಗೆ ಸಿಕ್ಕಿರುವ ಒರಿಸ್ಸಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು 100 ಕೋಟಿ ರುಪಾಯಿಗಳನ್ನು ಪ್ರಧಾನಿ ವಾಜಪೇಯಿ ಬುಧವಾರ ಬಿಡುಗಡೆ ಮಾಡಿದ್ದಾರೆ. ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಒರಿಸ್ಸಾದಲ್ಲಿ ಪರಿಹಾರ ಕಾರ್ಯಗಳಿಗಾಗಿ 200 ಕೋಟಿ ರುಪಾಯಿಗಳನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೇಂದ್ರ ಸರ್ಕಾರವನ್ನು ಕೋರಿದ್ದರು. ಗುರುವಾರ ಸೇರುವ ಕೇಂದ್ರ ಸಚಿವ ಸಂಪುಟ ಸಭೆ ಒರಿಸ್ಸಾ ಪ್ರವಾಹ ವಿಷಯವನ್ನು ಚರ್ಚಿಸುವ ಸಾಧ್ಯತೆಯಿದ್ದು ಮತ್ತಷ್ಟು ಪರಿಹಾರ ಹಣ ಬಿಡುಗಡೆಯಾಗುವ ನಿರೀಕ್ಷೆಯಿದೆ.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications