‘ಐ.ಟಿ. ಉದ್ಯಮದ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ಸೂತ್ರವೇ ಉತ್ತಮ’
ಬೆಂಗಳೂರು : ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಉದ್ಭವಿಸುವ ವಿವಾದಗಳನ್ನು ಸರಾಗವಾಗಿ ಇತ್ಯರ್ಥಪಡಿಸಿಕೊಳ್ಳಲು ಮಧ್ಯಸ್ಥಿಕೆ ಸೂತ್ರ ಅನುಸರಿಸುವುದು ಅಗತ್ಯ ಎಂದು ರಾಜ್ಯ ಮಾಹಿತಿ ತಂತ್ರಜ್ಞಾನ ಸಚಿವ ಎಂ.ಎಂ. ನಾಣಯ್ಯ ಅಭಿಪ್ರಾಯಪಟ್ಟಿದ್ದಾರೆ.
‘ಮಾಹಿತಿ ತಂತ್ರಜ್ಞಾನ ವ್ಯಾಜ್ಯಗಳಲ್ಲಿ ಮಧ್ಯಸ್ಥಿಕೆ’ ಎಂಬ ವಿಷಯ ಕುರಿತು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಮಂಡಳಗಳ ಒಕ್ಕೂಟವು ಶುಕ್ರವಾರ ನಗರದ ಅಶೋಕ ಹೋಟೆಲ್ನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ರಾಷ್ಟ್ರದ ಎಲ್ಲ ಐ.ಟಿ. ಕಂಪನಿಗಳು ಮಧ್ಯಸ್ಥಿಕೆ ಸೂತ್ರವನ್ನು ಅಳವಡಿಸಿಕೊಳ್ಳಬೇಕೆಂದರು.
ಮಧ್ಯಸ್ಥಿಕೆ ಸೂತ್ರವನ್ನು ಅಳವಡಿಸಿಕೊಂಡರೆ, ವಿವಾದಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗುತ್ತದೆ ಎಂದರು. ವಿಚಾರ ಸಂಕಿರಣದಲ್ಲಿ ಪ್ರಧಾನ ಭಾಷಣ ಮಾಡಿದ ನ್ಯಾಯಮೂರ್ತಿ ಜಿ.ಸಿ. ಭರೂಕ ಅವರು, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವ್ಯಾಜ್ಯಗಳು ಇನ್ನೂ ನ್ಯಾಯಾಲಯದ ಕಟ್ಟೆ ಹತ್ತಿಲ್ಲ. ಆದರೆ, ಆ ಪರಿಸ್ಥಿತಿ ಎದುರಿಸಲು ನಿಯಮಾವಳಿ ರೂಪಿಸುವ ಅಗತ್ಯವಿದೆ ಎಂದು ಹೇಳಿದರು.
ವಿವಾದಗಳನ್ನು ದೊಡ್ಡದು ಮಾಡಿಕೊಂಡು, ನ್ಯಾಯಾಲಯದ ಕಟ್ಟೆ ಏರುವ ಬದಲು ಸೌಹಾರ್ಧಯುತವಾಗಿ, ಮಧ್ಯಸ್ಥಿಕೆ ಸೂತ್ರದ ಮೂಲಕ ಪರಿಹಾರ ಕಂಡುಕೊಳ್ಳುವುದೇ ಸೂಕ್ತ ಎಂದು ಅವರೂ ಅಭಿಪ್ರಾಯ ಪಟ್ಟರು. ನ್ಯಾಯಾಲಯಗಳಲ್ಲಿ ಕಂಪ್ಯೂಟರ್ ಅಳವಡಿಕೆ ಕಾರ್ಯ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ ಎಂದೂ ಅವರು ಈ ಸಂದರ್ಭದಲ್ಲಿ ತಿಳಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications