ಕುದುರೆಮುಖ ಗಣಿಗಾರಿಕೆ: ತೀರ್ಮಾನಕ್ಕೆ ಬಾರದ ಸಂಪುಟ ಸಭೆ?
ಬೆಂಗಳೂರು : ಕುದುರೆಮುಖದಲ್ಲಿ ಗಣಿಗಾರಿಕೆಗೆ ಅನುಮತಿ ನೀಡುವ, ಇಲ್ಲವೆ ಈಗಾಗಲೇ ನೀಡಲಾಗಿರುವ ಅನುಮತಿ ಮುಂದುವರಿಸುವ ಬಗ್ಗೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನೇತೃತ್ವದಲ್ಲಿ ಗುರುವಾರ ಸಂಜೆ ನಡೆದ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದು ತಿಳಿದುಬಂದಿದೆ.
ಗುರುವಾರದ ಸಂಪುಟ ಸಭೆಯಲ್ಲಿ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಪಡೆಯಾಂದನ್ನು ರಚಿಸಲು ಸಭೆ ಅನುಮತಿಸಿತು ಎಂದು ತಿಳಿದುಬಂದಿದೆ.
ವಿದ್ಯುತ್ ದರ ಏರಿಕೆ ಇಲ್ಲ : ಗುರುವಾರದ ಸಭೆಯಲ್ಲಿ ವಿದ್ಯುತ್ ದರ ಏರಿಸುವ ವಿಚಾರ ಪ್ರಮುಖವಾಗಿ ಪ್ರಸ್ತಾಪವಾಯಿತಾದರೂ, ಬರದ ಹಿನ್ನೆಲೆಯಲ್ಲಿ ಈ ವರ್ಷ ವಿದ್ಯುತ್ ದರ ಏರಿಸದಿರಲು ಸಭೆ ನಿರ್ಧರಿಸಿತು. ಕುದುರೆಮುಖ ಕಬ್ಬಿಣ ಅದಿರು ಕಂಪನಿ( ಕೆಐಒಸಿಎಲ್)ಗೆ ಗಣಿಗಾರಿಕೆಗೆ ಅನುಮತಿ ಮುಂದುವರಿಸುವ ಬಗ್ಗೆ ಯಾವುದೇ ತೀರ್ಮಾನಕ್ಕೆ ಬರಲು ಸಭೆ ವಿಫಲವಾಯಿತು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಈ ಸಂಬಂಧ ಆ ಭಾಗದ ಶಾಸಕರ ಅಭಿಪ್ರಾಯವನ್ನು ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲೂ ಸಭೆ ನಿರ್ಧರಿಸಿದೆ. ಗುರುವಾರದ ಸಂಪುಟ ಸಭೆಯಲ್ಲಿ ಕುದುರೆಮುಖ ಗಣಿಗಾರಿಕೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಸಾಹಿತಿ ಡಾ. ಯು.ಆರ್. ಅನಂತಮೂರ್ತಿ ನೇತೃತ್ವದ ನಿಯೋಗಕ್ಕೆ ಮುಖ್ಯಮಂತ್ರಿ ಕೃಷ್ಣ ಭರವಸೆ ನೀಡಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
ಎಚ್ಚರಿಕೆ : ಈ ಮಧ್ಯೆ ಗುರುವಾರ ಖಾಸಗಿ ಟೀವಿ ಚಾನೆಲ್‌ಗೆ ಸಂದರ್ಶನ ನೀಡಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಯು.ಆರ್. ಅನಂತಮೂರ್ತಿ ಅವರು, ಕುದುರೆಮುಖದಲ್ಲಿ ಗಣಿಗಾರಿಕೆ ನಿಲ್ಲಿಸದಿದ್ದರೆ, ತೀವ್ರ ಹೋರಾಟ ನಡೆಸುವುದಾಗಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications