ಬರ : 350 ಕೋಟಿ ರು. ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಮನವಿ
ಬೆಂಗಳೂರು : ಕೇಂದ್ರ ಸರಕಾರದ ಮುಂದಿರುವ ರಾಜ್ಯದ ಹಲವು ಯೋಜನೆಗಳಿಗೆ ಮಂಜೂರಾತಿ ಪಡೆಯಲು ಹಾಗೂ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ತತ್‌ಕ್ಷಣವೇ 350 ಕೋಟಿ ರುಪಾಯಿ ವಿಶೇಷ ಅನುದಾನ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಶನಿವಾರ ರಾಜ್ಯ ಸಂಸತ್ ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.
ರಾಜ್ಯದ 21 ಜಿಲ್ಲೆಗಳಲ್ಲಿ ಮುಂಗಾರು ಕೈಕೊಟ್ಟು ಭೀಕರ ಕ್ಷಾಮ ಆವರಿಸಿರುವ ಹಿನ್ನೆಲೆಯಲ್ಲಿ ತುರ್ತು ಬರ ಕಾಮಗಾರಿ ಕೈಗೊಳ್ಳಲು 736 ಕೋಟಿ ರುಪಾಯಿಗಳ ಅಗತ್ಯ ಇದ್ದು, ಈ ಕೂಡಲೇ 350 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರವನ್ನು ಒತ್ತಾಯಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಸಂಬಂಧ ಕೂಡಲೇ ಹಣ ಬಿಡುಗಡೆ ಮಾಡಿಸಲು ಪ್ರಧಾನ ಮಂತ್ರಿಗಳ ಮೇಲೆ ಒತ್ತಡ ಹೇರುವಂತೆ ಸಹ ಸಂಸತ್ ಸದಸ್ಯರಿಗೆ ಕೃಷ್ಣ ಮನವಿ ಮಾಡಿದರು.
ಇದಲ್ಲದೆ ಹೈಕೋರ್ಟ್ ಪೀಠ, ನೀರಾವರಿ ಯೋಜನೆಗಳು, ನೈಋತ್ಯ ರೈಲ್ವೆ ವಲಯವೇ ಮೊದಲಾದ ರಾಜ್ಯದ 158 ಪ್ರಸ್ತಾವಗಳ ಬಗ್ಗೆ ಕೇಂದ್ರದಿಂದ ಸಮರ್ಪಕ ಉತ್ತರ ಬಾರದಿರುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂಬಂಧ ಆಗಸ್ಟ್ 7ರಂದು ದೆಹಲಿಯಲ್ಲಿ ಸಭೆ ಕರೆದು ಕೂಲಂಕಷವಾಗಿ ಚರ್ಚಿಸುವ ತೀರ್ಮಾನವನ್ನೂ ಕೈಗೊಳ್ಳಲಾಯಿತು ಎಂದು ಸಭೆಯ ನಂತರ ರಾಜ್ಯ ವಾರ್ತಾ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ನಿಯೋಗ : ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ಬಗ್ಗೆ ವಿವರಿಸಲು ಹಾಗೂ ರಾಜ್ಯ ಸರಕಾರದ ಪರವಾಗಿ ಮನವಿ ಪತ್ರವೊಂದನ್ನು ಸಲ್ಲಿಸಲು ಮುಖ್ಯಮಂತ್ರಿ ಕೃಷ್ಣ ಅವರ ನೇತೃತ್ವದ ರಾಜ್ಯ ಸಂಸತ್ ಸದಸ್ಯರ ನಿಯೋಗವನ್ನು ಪ್ರಧಾನ ಮಂತ್ರಿಗಳ ಬಳಿಗೆ ಕೊಂಡೊಯ್ಯುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಕೇಂದ್ರ ಪ್ರವಾಸೋದ್ಯಮ ಸಚಿವ ಅನಂತಕುಮಾರ್ ಹೇಳಿದರು.
ರಾಜ್ಯದ ಹಿತವನ್ನು ರಕ್ಷಿಸಲು ಪಕ್ಷಭೇದ ಮರೆತು ದುಡಿಯುವುದಾಗಿ ಹೇಳಿದ ಅವರು, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗನ್ನು ಪೂರೈಸಲು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದೂ ತಿಳಿಸಿದರು.
ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ, ರಾಮಕೃಷ್ಣ ಹೆಗಡೆ, ಎಸ್. ಬಂಗಾರಪ್ಪ, ಹಿರಿಯ ಸಂಸತ್ ಸದಸ್ಯರಾದ ಆರ್.ಎಲ್ ಜಾಲಪ್ಪ, ಜಾಫರ್ ಷರೀಫ್, ಚಿತ್ರನಟ ಅಂಬರೀಶ್, ಕೆ.ಸಿ. ಕೊಂಡಯ್ಯ, ಅನಂತಕುಮಾರ್, ಸನದಿ, ಕೆ.ಎಚ್. ಮುನಿಯಪ್ಪ ಅವರಲ್ಲದೆ ಕೃಷ್ಣ ಸಚಿವ ಸಂಪುಟದ ಹಿರಿಯ ಸಚಿವರು ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications