ರಾಜ್ಯಾದ್ಯಂತ ಕಿರಿಯ ವೈದ್ಯರುಗಳ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭ
ಬೆಂಗಳೂರು : ಇತ್ತೀಚೆಗಷ್ಟೇ ಸರ್ಕಾರ ಮಂಜೂರು ಮಾಡಿರುವ ನಾಲ್ಕು ಮೆಡಿಕಲ್ ಕಾಲೇಜುಗಳನ್ನು ತಕ್ಷಣ ರದ್ದು ಮಾಡುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಿರಿಯ ವೈದ್ಯರ ಸಂಘದ ಸದಸ್ಯರು ಅನಿರ್ದಿಷ್ಟ ಕಾಲದ ಧರಣಿ ಸತ್ಯಾಗ್ರಹವನ್ನು ಸೋಮವಾರ ಪ್ರಾರಂಭಿಸಿದರು.
ಬೆಂಗಳೂರಿನ ವಿಕ್ಟೋರಿಯಾ, ವಾಣಿ ವಿಲಾಸ, ಬೌರಿಂಗ್ ಆಸ್ಪತ್ರೆಯ ಕಿರಿಯ ವೈದ್ಯರುಗಳು ತಮ್ಮ ಕರ್ತವ್ಯವನ್ನು ಬಹಿಷ್ಕರಿಸಿ ಸೋಮವಾರದ ಮುಷ್ಕರದಲ್ಲಿ ಪಾಲ್ಗೊಂಡರು. ರಾಜ್ಯದಲ್ಲಿರುವ ಒಟ್ಟು 18 ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳ ಸುಮಾರು 7 ಸಾವಿರ ಸ್ನಾತಕೋತ್ತರ ಹಾಗೂ ಹೌಸ್ ಸರ್ಜನ್ ಕಿರಿಯ ವೈದ್ಯರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ.
ಮೈಸೂರು, ಹುಬ್ಬಳ್ಳಿ, ಬಳ್ಳಾರಿಗಳಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಯ ಕಿರಿಯ ವೈದ್ಯರು ಮುಷ್ಕರದಲ್ಲಿ ಭಾಗವಹಿಸಿರುವ ವರದಿಗಳು ಬಂದಿದ್ದು , ಕಿರಿಯ ವೈದ್ಯರುಗಳ ಬೇಡಿಕೆಗೆ ಸರ್ಕಾರ ಒಪ್ಪದಿದ್ದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಕೂಡ ಮಂಗಳವಾರದಿಂದ ಮುಷ್ಕರದಲ್ಲಿ ಭಾಗಿಯಾಗುವರೆಂದು ಸಂಘದ ಅಧ್ಯಕ್ಷ ಡಾ. ಎಚ್.ಜಿ. ವಿಜಯ್ಕುಮಾರ್ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications